ನವದೆಹಲಿ: ಕೇಂದ್ರ ಸಚಿವ ಸ್ಥಾನಕ್ಕೆ ಉಪೇಂದ್ರ ಕುಶ್ವಾಹ ರಾಜೀನಾಮೆ ನೀಡುವ ಮೂಲಕ ಪ್ರಧಾನಿ ಮೋದಿ ನೇತೃತ್ವದ ಸಂಪುಟಕ್ಕೆ ಆಘಾತ ನೀಡಿದ್ದಾರೆ.
ರಾಷ್ಟ್ರೀಯ ಲೋಕಶಕ್ತಿ ಪಕ್ಷದ ಮುಖ್ಯಸ್ಥರಾಗಿರುವ ಉಪೇಂದ್ರ ಕುಶ್ವಾಹ ಕೇಂದ್ರ ಮಾನವ ಸಂಪನ್ಮೂಲದ ರಾಜ್ಯ ಸಚಿವರಾಗಿದ್ದರು. ಈಗ ಏಕಾಏಕಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭಕ್ಕೆ ಒಂದು ದಿನವಷ್ಟೇ ಬಾಕಿ ಇದ್ದಂತೆ ಸಚಿವರು ರಾಜೀನಾಮೆ ಸಲ್ಲಿಸಿರುವುದು ಎನ್ ಡಿಎ ಸರ್ಕಾರಕ್ಕೆ ದೊಡ್ಡ ಆಘಾತವಾಗಿದೆ.
ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ರಾಜ್ಯ ಸಚಿವರಾಗಿದ್ದ ಕುಶ್ವಾಹ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಸೀಟು ಹಂಚಿಕೆ ಸಂಬಂಧ ಅಸಮಾಧಾನಗೊಂಡಿದ್ದರು. ಇದೀಗ ಎನ್ ಡಿಎ ಮೈತ್ರಿಕೂಟ ತೊರೆಯುವ ನಿರ್ಧಾರಕ್ಕೆ ಬಂದಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಹಾರದಲ್ಲಿ ಒಟ್ಟಾರೆ 40 ಲೋಕಸಭೆ ಸ್ಥಾನಗಳಿದ್ದು ಈ ಪೈಕಿ ಬಿಜೆಪಿ ಮತ್ತು ಜೆಡಿ (ಯು) ಎರಡು ಪಕ್ಷಗಳು ತಲಾ 17 ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ಒಪ್ಪಂದವಾಗಿದೆ. ಇದು ಕುಶ್ವಾಹ ಅವರಿಗೆ ಅಸಮಾಧಾನ ತಂದಿದೆ ಎನ್ನಲಾಗಿದೆ.
Upendra Kushwaha,resigns, as Union minister