ಅಧೀನ ನ್ಯಾಯಾಲಯಗಳಲ್ಲಿ ಕಲಾಪ ಕನ್ನಡದಲ್ಲೇ ನಡೆಸಬೇಕು

ಬೆಳಗಾವಿ,ಡಿ.11- ಅಧೀನ ನ್ಯಾಯಾಲಯಗಳ ಕಲಾಪಗಳನ್ನು ಕನ್ನಡದಲ್ಲಿಯೇ ನಡೆಸಬೇಕೆಂಬ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣೇಭೆರೇಗೌಡ ವಿಧಾನಪರಿಷತ್‍ನಲ್ಲಿಂದು ತಿಳಿಸಿದರು.

ಕಾಂಗ್ರೆಸ್ ಸದಸ್ಯ ಯು.ವಿ.ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಅಧೀನ ನ್ಯಾಯಾಲಯಗಳ ಕಲಾಪಗಳನ್ನು ಕನ್ನಡದಲ್ಲಿಯೇ ನಡೆಸಬೇಕೆಂದು ವಿಧಾನಮಂಡಲದ ಉಭಯ ಸದನಗಳಲ್ಲಿ ನಿರ್ಣಯವನ್ನು ಕೈಗೊಂಡು ರಾಷ್ಟ್ರಪತಿಗಳ ಅಂಗೀಕಾರಕ್ಕೆ ಕಳುಹಿಸಿಕೊಡಲಾಗಿತ್ತು. ರಾಷ್ಟ್ರಪತಿಗಳು ಗೃಹ ಇಲಾಖೆಗೆ ಅಭಿಪ್ರಾಯ ತಿಳಿಸುವಂತೆ ಕೋರಿದ್ದರು. ರಾಷ್ಟ್ರಪತಿಗಳ ಸೂಚನೆ ಮೇರೆಗೆ ಕೇಂದ್ರ ಗೃಹ ಇಲಾಖೆಯು ಅಧೀನ ನ್ಯಾಯಾಲಯಗಳ ಕಲಾಪವನ್ನು ಸ್ಥಳೀಯ ಭಾಷೆಗಳಲ್ಲಿ ನಡೆಸಬೇಕೆಂದು ಕರ್ನಾಟಕ ಗುಜರಾತ್, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ಒಟ್ಟು ಏಳು ರಾಜ್ಯಗಳು ಪ್ರಸ್ತಾವನೆಯನ್ನು ಸಲ್ಲಿಸಿದ್ದವು. ಇದೀಗ ಗೃಹ ಇಲಾಖೆಯ ನಿರ್ದೇಶನದಂತೆ ರಾಷ್ಟ್ರಪತಿಯವರು ನಮ್ಮ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ ಎಂದು ತಿಳಿಸಿದರು.

ನ್ಯಾಯಾಲಯದ ಕಲಾಪಗಳಲ್ಲಿ ಕೆಲವು ತೀರ್ಪುಗಳನ್ನುಉಲ್ಲೇಖಿಸುವಾಗ ಬೇರೆ ಬೇರೆ ರಾಜ್ಯಗಳ ತೀರ್ಪೂಗಳನ್ನು ಉಲ್ಲೇಖ ಮಾಡುತ್ತಾರೆ. ಒಂದು ರಾಜ್ಯಕ್ಕೆ ಕೊಟ್ಟರೆ ಬೇರೆ ಬೇರೆ ರಾಜ್ಯಗಳು ಕೂಡ ಇದೇ ಬೇಡಿಕೆಯನ್ನು ಮುಂದಿಡುತ್ತಾರೆ. ಸುಪ್ರೀಂಕೋರ್ಟ್‍ನ ಪೂರ್ಣ ಸಂವಿಧಾನ ಪೀಠ ಈ ರೀತಿ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯ ಹೇಳಿರುವಾಗ ಕರ್ನಾಟಕದ ಪ್ರಸ್ತಾವನೆ ತಿರಸ್ಕರಿಸಲಾಗಿದೆ ಎಂದರು.

ಜನಸಾಮಾನ್ಯರಿಗೆ ಅರ್ಥವಾಗುವಂತೆ ಸ್ಥಳೀಯ ಭಾಷೆಗಳಲ್ಲೇ ಕಲಾಪವನ್ನು ಕನ್ನಡದಲ್ಲೇ ನಡೆಸಬೇಕೆಂದು ಈ ಸದನದಲ್ಲೇ ನಿರ್ಣಯ ಮಾಡಿತ್ತು. ಆದರೆ ನ್ಯಾಯಾಲಯವೇ ಇದನ್ನು ಕಾರ್ಯಗತಗೊಳಿಸಲು ಸಾಧ್ಯವಿಲ್ಲ ಎಂದಿರುವಾಗ ನಾವು ಏನು ಮಾಡಲು ಸಾಧ್ಯವಿಲ್ಲ ಎಂದು ಸದನಕ್ಕೆ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ