ರಾಯಪುರ: ಛತ್ತೀಸ್ಗಢದ 90 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಆಡಳಿತರೂಢ ಬಿಜೆಪಿಯನ್ನು ಹಿಂದಿಕ್ಕಿ 59 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಅಧಿಕಾರಕ್ಕೆ ಏರುವುದು ಬಹುತೇಕ ಖಚಿತವಾಗಿದೆ.
ಛತ್ತೀಸ್ ಗಢದಲ್ಲಿ ಅಧಿಕಾರದ ಗದ್ದುಗೆಗೆ ಏರಲು 46 ಸಂಖ್ಯಾ ಬಲ ಬೇಕಿದ್ದು, ಕಾಂಗ್ರೆಸ್ ಈಗಾಗಲೇ 59 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಆಡಳಿತಾರೂಢ ಬಿಜೆಪಿ 24 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇತರರು 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಮ್ಯಾಜಿಕ್ ನಂಬರ್ ತಲುಪುತ್ತಿದ್ದಂತೆ ವಿವಿಧ ಜಿಲ್ಲಾ ಹಾಗೂ ತಾಲೂಕು ಕಾಂಗ್ರೆಸ್ ಕಚೇರಿಗಳ ಮುಂದೆ ಕಾರ್ಯಕರ್ತರು ಹರ್ಷವ್ಯಕ್ತಪಡಿಸುತ್ತಿದ್ದಾರೆ.