ನವದೆಹಲಿ, ಡಿ.11-ಖ್ಯಾತ ವಿಚಾರವಾದಿಗಳ ನರೇಂದ್ರ ದಾಬೋಲ್ಕರ್, ಗೋವಿಂದ ಪನ್ಸಾರೆ, ಡಾ.ಎಂ.ಎಂ.ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣಗಳಲ್ಲಿ ಸಾಮ್ಯತೆ ಇದ್ದರೆ ಒಂದೇ ಸಂಸ್ಥೆಯಿಂದ ಏಕೆ ತನಿಖೆ ಮಾಡಬಾರದು ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.
ಕಲ್ಬುರ್ಗಿ ಹತ್ಯೆ ಕುರಿತ ಪ್ರಕರಣದ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಉದಯ್ಲಲಿತ್ ಮತ್ತು ನವೀನ್ ಸಿನ್ಹಾ ಅವರನ್ನೊಳಗೊಂಡ ಪೀಠ ಈ ನಾಲ್ವರ ಹತ್ಯೆ ಪ್ರಕರಣಗಳ ಬಗ್ಗೆ ಒಂದೇ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.