31ನೇ ಹುಟ್ಟುಹಬ್ಬ ಆಚರಿಸಿಕೊಂಡ ನಟ ರವಿಚಂದ್ರನ್ ಅವರ ಹಿರಿಯ ಪುತ್ರ ಮನೋರಂಜನ್

ಡಿ.11-ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಹಿರಿಯ ಪುತ್ರ ಮನೋರಂಜನ್ ರವಿಚಂದ್ರನ್ ಅವರು ಇಂದು ತಮ್ಮ 31ನೆ ವರ್ಷದ ಹುಟ್ಟುಹಬ್ಬವನ್ನು ಕುಟುಂಬಸ್ಥರ ಜೊತೆ ಸರಳವಾಗಿ ಆಚರಿಸಿಕೊಂಡರು.

ಸಾಹೇಬ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಮನೋರಂಜನ್ ನಂತರ ಬೃಹಸ್ಪತಿ ಚಿತ್ರದಲ್ಲಿ ನಟಿಸಿದ್ದಾರೆ.

ನಟ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಆಚರಿಸಿಕೊಳ್ಳದೆ ಸರಳವಾಗಿ ಆಚರಿಸಿಕೊಳ್ಳುತ್ತಿರುವುದಾಗಿ ಅಭಿಮಾನಿಗಳಿಗೆ ತಿಳಿಸಿದರು.
ಆದರೆ ಅಭಿಮಾನಿಗಳು ಮನೆಗೆ ತೆರಳಿ ನೆಚ್ಚಿನ ನಟನಿಗೆ ಶುಭಾಶಯ ಕೋರಿದರು.

ಪ್ರಾರಂಭ ಎಂಬ ಚಿತ್ರದಲ್ಲಿ ನಟ ಮನೋರಂಜನ್ ನಟಿಸುತ್ತಿದ್ದು, ಜನವರಿಯಲ್ಲಿ ಚಿತ್ರ ಸೆಟ್ಟೇರಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ