ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ರಾಹುಲ್ ಗಾಂಧಿ ಯಶಸ್ವಿ, ಸಚಿವ ಕೃಷ್ಣಭ್ಯೆರೇ ಗೌಡ

ಬೆಳಗಾವಿ (ಸುವರ್ಣಸೌಧ), ಡಿ.11- ವಿಪಕ್ಷಗಳ ವ್ಯಂಗ್ಯದ ನಡುವೆಯೂ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರ ಧೃತಿಗೆಡದ ಹೋರಾಟದಿಂದ ಮೂರೂ ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದು ಸಚಿವ ಕೃಷ್ಣಭ್ಯೆರೇ ಗೌಡ ಅಭಿಪ್ರಾಯಪಟ್ಟರು.

ಸುವರ್ಣಸೌಧದ ಮೊಗಸಾಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್‍ಗಾಂಧಿ ಅವರನ್ನು ನಿರಂತರವಾಗಿ ಬಿಜೆಪಿ ಪಕ್ಷ ವ್ಯಂಗ್ಯ ಮಾಡುತ್ತಿತ್ತು. ಇದಾವುದಕ್ಕೂ ತಲೆಕೆಡಿಸಿಕೊಳ್ಳದೆ ಅವರು ಹೋರಾಟ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಧಾನಿ ಮೋದಿ ಅವರ ಸುಳ್ಳುಗಳನ್ನು ಜನ ತಿರಸ್ಕಾರ ಮಾಡಿದ್ದಾರೆ. ತೆಲಂಗಾಣದಲ್ಲಿ ಜನಮನ್ನಣೆ ಗಳಿಸುವಲ್ಲಿ ನಾವು ಮಾಡಿದ ಪ್ರಯತ್ನ ಯಶಸ್ವಿಯಾಗಿಲ್ಲ. ಮುಂದಿನ ದಿನಗಳಲ್ಲಿ ಪ್ರಯತ್ನವನ್ನು ತೀವ್ರಗೊಳಿಸುತ್ತೇವೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ