ರಾಜಸ್ಥಾನದ ಸಿಎಂ ರೇಸ್‌ನಲ್ಲಿ ರಾಜಕೀಯ ಜಾದೂಗಾರ

ಜೈಪುರರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಟ್ಟು 199 ಕ್ಷೇತ್ರಗಳ ಪೈಕಿ 99 ಕ್ಷೇತ್ರಗಳಲ್ಲಿ ಜಯಗಳಿಸಿದ್ದು, ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ 73 ಸ್ಥಾನಗಳನ್ನು ಪಡೆಯುವ ಮೂಲಕ ಎರಡನೇ ಸ್ಥಾನದಲ್ಲಿದೆ. ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಆರು ಸ್ಥಾನಗಳನ್ನು ಪಡೆದರೆ, ಇತರರು 21 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ಗೆಲುವಿಗೆ ಪಕ್ಷದ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಪಾತ್ರ ಮುಖ್ಯವಾಗಿದೆ ಎಂದು ಪರಿಗಣಿಸಲಾಗಿದೆ. 2013 ರ ರಾಜಸ್ಥಾನ ವಿಧಾನಸಭಾ ಚುನಾವಣೆ ಮತ್ತು 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಳಿಕ ಈ ಚುನಾವಣೆಯಲ್ಲಿ ಮತ್ತೆ ಪಕ್ಷದಲ್ಲಿ ಗೆಲುವಿನ ಪತಾಕೆ ಹಾರಿಸಲಾಗಿದೆ. ಇದೀಗ ಯಾರು ಮುಖ್ಯಮಂತ್ರಿಯಾಗಬೇಕು ಎಂಬ ಬಗ್ಗೆ ಇಂದು ಜೈಪುರದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ರಾಜಸ್ಥಾನದ ‘ರಾಜಕೀಯದ ಜಾದೂಗಾರ’ ಎಂದೇ ಖ್ಯಾತಿ ಪಡೆದಿರುವ ಅಶೋಕ್ ಗೆಹ್ಲೋಟ್, 2018 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಬಹುಮತದ ಸನಿಹಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹಾಗಾಗಿ ಗೆಹ್ಲೋಟ್ ಅವರಿಗೆ ರಾಜಸ್ಥಾನದ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರ ವಹಿಸಬಹುದೆಂದು ಊಹಿಸಲಾಗಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ