ಬೆಳಗಾವಿ, ಡಿ.13- ವಿಧಾನಪರಿಷತ್ನ ಸಭಾಪತಿ ಸ್ಥಾನವನ್ನು ಮಾಜಿ ಸಚಿವ ಬಸವರಾಜ ಹೊರಟ್ಟಿ ಅವರಿಗೆ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಶಾಸಕ ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರಟ್ಟಿ ಅವರು ಉತ್ತರ ಕರ್ನಾಟಕ ಭಾಗದ ಪ್ರಭಾವಿ ನಾಯಕರು.ಜೆಡಿಎಸ್ನ ಪ್ರಮುಖ ಮುಖಂಡರು.ಅವರಿಗೆ ಸಭಾಪತಿ ಸ್ಥಾನ ನೀಡಬೇಕಾಗಿತ್ತು.ಆದರೆ, ಪ್ರತಾಪ್ಚಂದ್ರಶೆಟ್ಟಿ ಅವರಿಗೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್, ಜೆಡಿಎಸ್ ಮುಖಂಡರು ಹೊರಟ್ಟಿ ಅವರಿಗೆ ಅನ್ಯಾಯ ಮಾಡಿದ್ದಾರೆ ಎಂದು ದೂರಿದರು.