ಪರ್ತ್: ನಾಳೆಯಿಂದ ಪರ್ತ್ನಲ್ಲಿ ಆರಂಭವಾಗಲಿರುವ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ 13 ಆಟಗಾರರನ್ನೊಳಗೊಂಡ ಟೀಂ ಇಂಡಿಯಾವನ್ನ ಪ್ರಕಟಿಸಿದೆ.
ಕೊಹ್ಲಿ ಪಡೆ ಎರಡನೇ ಟೆಸ್ಟ್ಗೆ ಸಜ್ಜಾಗುತ್ತಿರುವ ಬೆನ್ನಲ್ಲೆ ತಂಡ ಗಾಯದ ಸಮಸ್ಯೆಗ ಸಿಲುಕಿದೆ. ಮೊನ್ನೆ ಅಡಿಲೇಡ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 31 ರನ್ಗಳಿಂದ ಗೆದ್ದುಕೊಂಡಿತ್ತು. ಈ ಪಂದ್ಯದಲ್ಲಿ ಆಫ್ ಸ್ಪಿನ್ನರ್ ಆರ್.ಅಶ್ವಿನ್ ಮತ್ತು ಹಿಟ್ಮ್ಯಾನ್ ರೋಹಿತ್ ಶರ್ಮಾ ಗಾಯಗೊಂಡಿದ್ದರು. ಹೀಗಾಗಿ ರೋಹಿತ್ ಶರ್ಮಾ ಮತ್ತು ಆರ್.ಅಶ್ವಿನ್ಎರಡನೇ ಟೆಸ್ಟ್ನಿಂದ ಹೊರ ನಡೆದಿದ್ದಾರೆ. ಇನ್ನು ಅಭ್ಯಾಸ ಪಂದ್ಯದ ವೇಳೆ ಗಾಯಗೊಂಡಿದ್ದ ಮರಿ ಸಚಿನ್ ಪೃಥ್ವಿ ಶಾ ಎರಡನೇ ಟೆಸ್ಟ್ ಪಂದ್ಯವನ್ನ ಆಡುತಿಲ್ಲ.ಮೊನ್ನೆ ಚೇತರಿಕೆ ಕಂಡಿದ್ದಾರೆ ಎಂದು ಹೇಳಲಾಗುತ್ತಿತ್ತು.
ಎರಡನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ: ವಿರಾಟ್ ಕೊಹ್ಲಿ (ನಾಯಕ), ಮುರಳಿ ವಿಜಯ್, ಕೆ.ಎಲ್.ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹನೆ, ಹನುಮ ವಿಹಾರಿ, ರಿಷಭ್ ಪಂತ್, ರವೀಂದ್ರ ಜಡೇಜಾ, ಇಶಾಂತ್ ಶರ್ಮಾ, ಮೊಹ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್.