ಪೊಲೀಸ್ ಸಿಬ್ಬಂಧಿ ವೇತನ ಪರಿಷ್ಕರಣೆ, ಔರಾದ್ಕರ್ ಸಮಿತಿಯು ನೀಡಿರುವ ವರದಿಯನ್ನು ಬೇಗ ಅನುಷ್ಟಾನಕ್ಕೆ ತರಲಾಗುವುದು, ಡಿಸಿಎಂ

ಬೆಳಗಾವಿ, ಡಿ.14- ಪೆÇಲೀಸ್ ಇಲಾಖೆಯ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಎಡಿಜಿಪಿ ರಾಘವೇಂದ್ರ ಔರಾದ್ಕರ್ ಅವರನ್ನೊಳಗೊಂಡ ಸಮಿತಿಯು ನೀಡಿರುವ ವರದಿಯನ್ನು ಆದಷ್ಟು ಬೇಗ ಅನುಷ್ಠಾನ ಮಾಡಲಾಗುವುದು ಎಂದು ಗೃಹ ಖಾತೆ ಹೊಂದಿರುವ ಡಿಸಿಎಂ ಡಾ.ಜಿ.ಪರಮೇಶ್ವರ್ ವಿಧಾನಪರಿಷತ್‍ಗೆ ತಿಳಿಸಿದರು.

ವರದಿಯನ್ನು ಅನುಷ್ಠಾನ ಮಾಡುವ ಸಂಬಂಧ ಹಣಕಾಸು ಇಲಾಖೆಗೆ ಕಡತವನ್ನು ಕಳುಹಿಸಿಕೊಡಲಾಗಿದೆ. ಅಲ್ಲಿಂದ ಅನುಮತಿ ಸಿಕ್ಕ ತಕ್ಷಣ ವರದಿಯನ್ನು ಅನುಷ್ಠಾನ ಮಾಡಲಾಗುವುದು ಎಂದು ಹೇಳಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಪ್ರಾಣೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪೆÇಲೀಸ್ ಸಿಬ್ಬಂದಿ ವೇತನ ಪರಿಷ್ಕರಣೆ ಮಾಡಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಕೇಳಿಬಂದಿತ್ತು. ಹೀಗಾಗಿ ಎಡಿಜಿಪಿ ರಾಘವೇಂದ್ರ ಔರಾದ್ಕರ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿ ವರದಿ ನೀಡುವಂತೆ ಸೂಚಿಸಲಾಗಿತ್ತು.

ವರದಿ ಸರ್ಕಾರದ ಕೈ ಸೇರಿದ್ದು, ಶೀಘ್ರದಲ್ಲೇ ಅನುಷ್ಠಾನ ಮಾಡುತ್ತೇವೆ. ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಇದಕ್ಕೆ ಸಮ್ಮತಿಸಿದ್ದಾರೆ ಎಂದರು.
ಪೆÇಲೀಸರಿಗೆ ಈಗಾಗಲೇ ಸಾರಿಗೆ ಮತ್ತು ಸೇವಾ ಭತ್ಯೆಯಾಗಿ ತಿಂಗಳಿಗೆ ಎರಡು ಸಾವಿರ ರೂ.ನೀಡುತ್ತಿದ್ದೇವೆ. ಜೊತೆಗೆ ಹಾರ್ಡ್‍ಶಿಪ್ ಭತ್ಯೆಗೆ ಒಂದು ಸಾವಿರ ನೀಡುತ್ತಿದ್ದೇವೆ. ಸಮಾನ ವೇತನ ನೀಡಬೇಕೆಂಬ ಬೇಡಿಕೆಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇಲ್ಲಿನ ಸಿಬ್ಬಂದಿಗಳಿಗೆ ನಮ್ಮ ಸರ್ಕಾರ ಎಲ್ಲ ರೀತಿಯ ಸವಲತ್ತುಗಳನ್ನು ನೀಡುತ್ತಿದೆ. ಹಿಂದೆ ಸಮಾನ ವೇತನ ನೀಡುತ್ತಿಲ್ಲ ಎಂಬ ಕಾರಣಕ್ಕಾಗಿ ಪೆÇಲೀಸರು ಪ್ರತಿಭಟನೆ ನಡೆಸುವ ಹಂತಕ್ಕೆ ಬಂದಿದ್ದರು ಎಂದು ತಿಳಿಸಿದರು.

ಮಹಿಳೆಯರಿಗೆ ವಿನಾಯ್ತಿ:
ಪೆÇಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿಗಳಿಗೆ ಪ್ಯಾಂಟ್-ಶರ್ಟ್ ಕಡ್ಡಾಯವಾಗಿ ಧರಿಸಬೇಕೆಂಬ ನಿಯಮವನ್ನು ಜಾರಿ ಮಾಡಲಾಗಿದೆ. ಇಲಾಖೆಯಲ್ಲಿ ಶಿಸ್ತು ತರಬೇಕು ಎಂಬ ಕಾರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.ಆದರೆ ವಯಸ್ಸಾಗಿರುವ ಮಹಿಳೆಯರಿಗೆ ಇದರಿಂದ ಕೆಲವು ಸಮಸ್ಯೆಗಳು ಉಂಟಾಗುತ್ತದೆ ಎಂಬ ಅಭಿಪ್ರಾಯ ಕೇಳಿಬಂದಿತ್ತು.ಈ ಹಿನ್ನೆಲೆಯಲ್ಲಿ 40ರಿಂದ ಇಲ್ಲವೇ 50 ವರ್ಷ ಮೇಲ್ಪಟ್ಟ ಮಹಿಳಾ ಸಿಬ್ಬಂದಿಗೆ ಪ್ಯಾಂಟ್-ಶರ್ಟ್ ಕಡ್ಡಾಯ ಮಾಡದೆ ಹಿಂದಿರುವ ಸಮವಸ್ತ್ರದಲ್ಲೇ ಕರ್ತವ್ಯ ನಿರ್ವಹಿಸುವಂತೆ ವಿನಾಯಿತಿ ನೀಡಲಾಗುವುದು. ಶೀಘ್ರದಲ್ಲೇ ಹಿರಿಯ ಅಧಿಕಾರಿಗಳಿಗೆ ಚರ್ಚಿಸಿ ಕ್ರಮ ಕೈಗೊಳ್ಳುವ ಆಶ್ವಾಸನೆ ನೀಡುವುದಾಗಿ ಪರಮೇಶ್ವರ್ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ