
ಬೆಂಗಳೂರು, ಡಿ.14- ಯಾವುದೋ ವಾಹನ ಡಿಕ್ಕಿ ಹೊಡೆದು ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಜಾಲ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು-ಬಳ್ಳಾರಿ ರಸ್ತೆ, ಎಂವಿಐಟಿ ಕ್ರಾಸ್ನಲ್ಲಿ ರಾತ್ರಿ ಸುಮಾರು 9.15ರಲ್ಲಿ 60 ವರ್ಷದ ವೃದ್ಧರೊಬ್ಬರಿಗೆ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.
ಡಿಕ್ಕಿ ರಭಸಕ್ಕೆ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇವರ ಹೆಸರು, ವಿಳಾಸ ತಿಳಿದು ಬಂದಿಲ್ಲ. ಈ ಸಂಬಂಧ ಚಿಕ್ಕಜಾಲ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.