ಬೆಳಗಾವಿ, ಡಿ.14- ರಸ್ತೆ ಅಪಘಾತ ಪ್ರಮಾಣ ತಗ್ಗಿಸುವ ದೃಷ್ಟಿಯಿಂದ ಯರಗಟ್ಟಿ-ಬೆಳಗಾವಿ ರಾಜ್ಯ ಹೆದ್ದಾರಿ-20 ರಲ್ಲಿ ವಿಶ್ವಬ್ಯಾಂಕ್ ನೆರವಿನಿಂದ ಅನುಷ್ಠಾನಗೊಳಿಸಿರುವ ಪೈಲಟ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸುವ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ವಿಶ್ವಬ್ಯಾಂಕ್ ನೆರವಿನಿಂದ ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಕೆಶಿಪ್)ಯಡಿ ನಗರದ ಪೆÇಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸುರಕ್ಷಿತ ಮಾರ್ಗ ಪ್ರಾತ್ಯಕ್ಷಿಕೆ ರಸ್ತೆ ಸುರಕ್ಷತಾ ಜಾಗೃತಿ ಪ್ರಚಾರಾಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅಪಘಾತ ಪ್ರಮಾಣ ತಗ್ಗಿಸುವ ಮೂಲಕ ಜನರ ಪ್ರಾಣರಕ್ಷಣೆಗೆ ಅಗತ್ಯವಿರುವ ಎಲ್ಲ ರೀತಿಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ.ಯರಗಟ್ಟಿ-ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಸುರಕ್ಷತೆಗಾಗಿ ಅಂತಾರಾಷ್ಟ್ರೀಯ ದರ್ಜೆಯ ವಿನೂತನ ಪ್ರಯೋಗವನ್ನು ರಾಜ್ಯದಲ್ಲಿಯೇ ಮೊದಲ ಬಾರಿ ಅನುಷ್ಠಾನಗೊಳಿಸಲಾಗಿದೆ. ಮುಂಬರುವ ದಿನಗಳಲ್ಲಿ ರಾಜ್ಯದ ಇತರೆ ಹೆದ್ದಾರಿಗಳಲ್ಲೂ ಇದೇ ಮಾದರಿಯ ಸುರಕ್ಷತಾ ಕ್ರಮ ಅಳವಡಿಸಲಾಗುವುದು ಎಂದರು.
ರಸ್ತೆ ಅಪಘಾತ ಸಂದರ್ಭದಲ್ಲಿ ತಕ್ಷಣವೇ 108 ಆ್ಯಂಬುಲೆನ್ಸ್‍ಗೆ ಕರೆ ಮಾಡಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸೇರಿಸುವ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸುವ ಕಿರುಚಿತ್ರವನ್ನು ಮುಖ್ಯಮಂತ್ರಿಗಳು ವೀಕ್ಷಿಸಿದರು.
ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದರಿಂದ ಆಗುವ ಅನಾಹುತಗಳ ಕುರಿತು ಜಾಗೃತಿ ಮೂಡಿಸುವ ಜನಪದ ಗೀತೆ ಆಲಿಸಿದರು.
ನಂತರ ರಸ್ತೆ ಸುರಕ್ಷತೆ ಕುರಿತ ಕ್ಯಾಲೆಂಡರ್, ರೇಡಿಯೋ ಜಿಂಗಲ್, ಮಡಿಕೆಪತ್ರ ಮತ್ತಿತರ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿದರು.
ಮಾಜಿ ಸಚಿವರು ಮತ್ತು ಯಮಕನಮರಡಿ ಮತಕ್ಷೇತ್ರದ ಶಾಸಕರಾದ ಸತೀಶ ಜಾರಕಿಹೊಳಿ ಮತ್ತಿತರರು ಉಪಸ್ಥಿತರಿದ್ದರು.
ಇದಕ್ಕೂ ಮುಂಚೆ ಆಗಮಿಸಿದ್ದ ಲೋಕೋಪಯೋಗಿ ಇಲಾಖೆಯ ಸಚಿವ ಹೆಚ್.ಡಿ.ರೇವಣ್ಣ ಅವರು, ರಸ್ತೆ ಸುರಕ್ಷತೆ ಜಾಗೃತಿ ಪ್ರಚಾರಾಂದೋಲನದ ಮಾದರಿಯನ್ನು ವೀಕ್ಷಿಸಿದರು.
ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲï, ಕೆಶಿಪ್ ಮುಖ್ಯ ಯೋಜನಾಧಿಕಾರಿ ನವೀನರಾಜ್ ಸಿಂಗ್, ಯೋಜನಾ ನಿರ್ದೇಶಕ ಬಿ.ಶಿವಶಂಕರ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಪೆÇಲೀಸ್ ಆಯುಕ್ತರಾದ ಡಾ.ಡಿ.ಸಿ.ರಾಜಪ್ಪ ಮತ್ತಿತರರು ಉಪಸ್ಥಿತರಿದ್ದರು.