ಭೋಪಾಲ್: ಅತ್ಯಂತ ಹಿರಿಯ ಸಂಸದ, ಮುಖಂಡ ಕಮಲನಾಥ್ (72) ಅವರು ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಡಿ.17ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಇರುವುದಿಲ್ಲ. ಸಿಎಂ ಗಾದಿ ವಿಚಾರದಲ್ಲಿ ಜ್ಯೋತಿರಾಧ್ಯ ಸಿಂಧ್ಯಾ ಹಾಗೂ ಕಮಲನಾಥ್ ನಡುವೆ ತೀವ್ರ ಪೈಪೋಟಿ ಎದುರಾಗಿತ್ತು. ಸಾಕಷ್ಟು ಬೆಳವಣಿಗೆಯ ನಂತರ ಮಧ್ಯಪ್ರದೇಶದ ಕಾಂಗ್ರೆಸ್ ಸಮಿತಿಯು ಕಮಲನಾಥ್ ಅವರನ್ನು ನೂತನ ಸಿಎಂ ಆಗಿ ಘೋಷಿಸಿದೆ.
ಛಿಂದವಾಡಾ ಲೋಕಸಭಾ ಕ್ಷೇತ್ರದಿಂದ 9 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಕಮಲನಾಥ್ 2014ರಲ್ಲಿ 16ನೇ ಲೋಕಸಭೆಗೆ ಹಂಗಾಮಿ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ವಾಣಿಜ್ಯ ಮತ್ತು ಕೈಗಾರಿಕೋದ್ಯಮ, ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಈ ವರ್ಷ ಮೇನಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ನ ಅಧ್ಯಕ್ಷರಾಗಿ ಆಯ್ಕೆಯಾಗಿ ವಿಧಾನಸಭಾ ಚುನಾವಣೆಯ ನೇತೃತ್ವ ವಹಿಸಿದ್ದರು.
madhya pradesh,congress,kamal nath,CM