ರಫೇಲ್ ವಿಚಾರ: ಸುಪ್ರೀಂ ತೀರ್ಪು ಬೆನ್ನಲ್ಲೇ ಸಂಸತ್ತಿನಲ್ಲಿ ಗದ್ದಲ-ವಾಕ್ಸಮರ

ನವದೆಹಲಿ: ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಯಾವುದೇ ತನಿಖೆ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ಬೆನ್ನಲ್ಲೇ ಸಂಸತ್ತಿನಲ್ಲಿ ಬಿಜೆಪಿ, ಕಾಂಗ್ರೆಸ್ ಸದಸ್ಯರ ನಡುವೆ ತೀವ್ರ ವಾಗ್ವಾದ ಆರಂಭವಾಗಿದೆ.

ಸುಪ್ರೀಂ ತೀರ್ಪು ಕೇಂದ್ರ ಸರಕಾರಕ್ಕೆ ಬಿಗ್ ರಿಲೀಫ್‌ ನೀಡಿದ್ದಲ್ಲದೇ ಪ್ರತಿಪಕ್ಷ ಕಾಂಗ್ರೆಸ್‌ ವಿರುದ್ಧ ಬಿಜೆಪಿಗೆ ಅಸ್ತ್ರವೊಂದು ದೊರೆತಂತಾಗಿದೆ.

ರಫೇಲ್‌ ಯುದ್ಧ ವಿಮಾನ ಗುಣಮಟ್ಟದಲ್ಲಿ ಹಾಗೂ ಮೌಲ್ಯದಲ್ಲಿ ಯಾವುದೇ ಲೋಪವಿಲ್ಲ ಎಂದು ಸುಪ್ರೀಂ ಕೋರ್ಟ್‌ ನ್ಯಾಯಪೀಠವೇ ಸ್ಪಷ್ಟಪಡಿಸಿದೆ. ಈ ಬಗ್ಗೆ ರಾಹುಲ್‌ ಗಾಂಧಿ ಇಡೀ ದೇಶಕ್ಕೆ ಬರಿ ಸುಳ್ಳು ಹೇಳಿದ್ದಾರೆ ಎಂದು ಬಿಜೆಪಿ ಸದಸ್ಯರು ಕಾಂಗ್ರೆಸ್‌ ವಿರುದ್ಧ ಗುಡುಗಿದರು. ಮೋದಿ ಹಾಗೂ ಕೇಂದ್ರದ ವಿರುದ್ಧ ಸುಳ್ಳು ಹೇಳಿರುವ ರಾಹುಲ್‌ ದೇಶಕ್ಕೆ ಕ್ಷಮೆ ಕೋರಬೇಕು ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದರು.

ಸುಪ್ರೀಂ ಕೋರ್ಟ್‌ ತೀರ್ಪು ಹೊರಬರುತ್ತಿದ್ದಂತೆ ಲೋಕಸಭೆಯಲ್ಲಿ ಬಿಜೆಪಿ ಸದಸ್ಯರು ಕಾಂಗ್ರೆಸ್‌ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇನ್ನು ರಫೇಲ್‌ ಡೀಲ್‌ ಕುರಿತ ಸುಪ್ರೀಂ ಕೋರ್ಟ್‌ ತೀರ್ಪು ರಾಜ್ಯಸಭೆಯಲ್ಲಿಯೂ ಪ್ರತಿಧ್ವನಿಸಿತು. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷ ಸದಸ್ಯರ ನಡುವೆ ಗದ್ದಲ, ವಾಕ್ಸಮರ ನಡೆಯಿತು.

rafale deal,supreme court,parliament session

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ