ನಾಳೆ ಪ್ರೆಸ್ ಕ್ಲಬ್ನಲ್ಲಿ ಪೊಲಿಟಿಕಲ್ ಅಡ್ವೈಸರ್ ಪತ್ರಿಕೆಯ ವಿಶೇಷ ಸಂಚಿಕೆ ಬಿಡುಗಡೆ ಸಮಾರಂಭ

ಬೆಂಗಳೂರು,ಡಿ.14- ಪೆÇಲಿಟಿಕಲ್ ಅಡ್ವೈಸರ್ ಪಾಕ್ಷಿಕ ಪತ್ರಿಕೆಯು ನಾಳೆ ಬೆಳಗ್ಗೆ 11 ಗಂಟೆಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ವಿಶೇಷ ಸಂಚಿಕೆ ಬಿಡುಗಡೆ ಸಮಾರಂಭವನ್ನು ನಡೆಸಲಾಗುವುದು.

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಸಂಚಿಕೆ ಬಿಡುಗೆಡ ಮಾಡಲಿದ್ದು, ಪ್ರೆಸ್‍ಕ್ಲಬ್ ಅಧ್ಯಕ್ಷ ಸದಾಶಿವ ಶೆಣೈ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಧಾನಪರಿಷತ್ ಸದಸ್ಯರಾದ ಭೋಜೇಗೌಡ ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದಾರೆ.

ಅಖಿಲ ಭಾರತ ನಾಯಕ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ವಿಜಯ ನಾಯಕ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಎ.ಆನಂದ್, ಕರ್ನಾಟಕ ಜರ್ನಲಿಸ್ಟ್ ಅಸೋಸಿಯೇಷನ್ ಅಧ್ಯಕ್ಷ ಬಿ.ನಾರಾಯಣ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ