ಬೆಂಗಳೂರು, ಡಿ.14- ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀತಿ-ಸಂಹಿತೆ ಉಲ್ಲಂಘನೆ ಆರೋಪದಡಿ ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಹೆಬ್ಬಾಳ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅಕ್ರಮ ನಡೆಯುತ್ತಿದೆ ಎಂದು ಮತಗಟ್ಟೆ ಸಮೀಪ ಪ್ರತಿಭಟನೆ ನಡೆಸಿದ್ದರಿಂದ ಅವರ ವಿರುದ್ಧ ಸಂಜಯನಗರ ಪೆÇಲೀಸರು ಅವರನ್ನು ಬಂಧಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಬಳಿಕ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದ ಪೆÇಲೀಸರ ಕ್ರಮವನ್ನು ಪ್ರಶ್ನಿಸಿ ನ್ಯಾರಾಯಣಸ್ವಾಮಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದೀಗ ಹೈಕೋರ್ಟ್ನ ಏಕಸದಸ್ಯ ಪೀಠ ತನಿಖಾಧಿಕಾರಿ ಡಿ.15ರಂದು ಖುದ್ದು ಹಾಜರಾಗಬೇಕೆಂದು ಸೂಚನೆ ನೀಡಿ ಪ್ರಕರಣಕ್ಕೆ ತಾತ್ಕಾಲಿಕ ತಡೆ ನೀಡಿ ವಿಚಾರಣೆಯನ್ನು ಮುಂದೂಡಿದೆ.