4 ದಿನ ಐಸಿಯುನಲ್ಲೇ ಚಿಕಿತ್ಸೆ- ಮತ್ತಷ್ಟು ಚೇತರಿಸಿಕೊಂಡಿದ್ದಾರೆ ನಡೆದಾಡೋ ದೇವ್ರು

ಚೆನ್ನೈ: ಸಿದ್ದಗಂಗಾ ಶ್ರೀಗಳಿಗೆ ಸೋಂಕು ತಾಗಿರುವ ಹಿನ್ನೆಲೆಯಲ್ಲಿ ವಾರ್ಡ್ ನಿಂದ ಮತ್ತೆ ಐಸಿಯುಗೆ ಶಿಫ್ಟ್ ಮಾಡಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಅಂತಾ ರೇಲಾ ಆಸ್ಪತ್ರೆಯ ವೈದ್ಯ ಡಾ. ಪರಮೇಶ್ವರ್ ತಿಳಿಸಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶ್ರೀಗಳಿಗೆ ಸೋಂಕು ತಾಗಿದ್ದರಿಂದ ಅವರನ್ನು ರೇಲಾ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ದಾಖಲಿಸಲಾಗಿದೆ. ಗುರುವಾರದಂದು ಶ್ರೀಗಳ ಆರೋಗ್ಯದಲ್ಲಿ ಚೇತರಿಕೆಯಾಗಿದ್ದರಿಂದ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಈಗ ಸೋಂಕು ತಗಲಿರುವ ಪರಿಣಾಮ ಅವರನ್ನು ಮತ್ತೆ ಐಸಿಯುಗೆ ಶಿಫ್ಟ್ ಮಾಡಲಾಗಿದೆ. ಹಾಗೆಯೇ ಇನ್ನು 4 ದಿನಗಳ ಕಾಲ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಯುತ್ತದೆ. ಅಲ್ಲದೆ ಸದ್ಯ ಶ್ರೀಗಳು ಐಸಿಯುನಲ್ಲಿ ಮತ್ತಷ್ಟು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಿದ್ದಗಂಗಾ ಶ್ರೀಗಳನ್ನು ನೋಡಲು ಬರುವವರ ಸಂಖ್ಯೆಯಲ್ಲಿ ಹೆಚ್ಚಳವಾದ್ದರಿಂದ ಅವರಿಗೆ ಸೋಂಕು ತಗುಲಿದೆ. ಇದು ಸೂಕ್ಷ್ಮವಾದ ಸಂಗತಿ ಹೀಗೆ ಸೋಂಕು ಹೆಚ್ಚಾದರೆ ಶ್ರೀಗಳಿಗೆ ತೊಂದರೆಯಾಗುತ್ತದೆ. ಆದ್ದರಿಂದ ಡಾ. ರೇಲಾ ಅವರು ಶ್ರೀಗಳನ್ನು ಐಸಿಯುಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲು ನಿರ್ಧರಿಸಿದರು. ಈಗ ಯಾವುದೇ ರೀತಿಯ ಭಯಪಡುವ ಅಗತ್ಯವಿಲ್ಲ. ಶ್ರೀಗಳು ಕ್ಷೇಮವಾಗಿದ್ದಾರೆ. ಬಹುಶಃ ಮುಂದಿನ ವಾರ ಶ್ರೀಗಳನ್ನು ಡಿಸ್ಚಾರ್ಜ್ ಮಾಡುಬಹುದು ಎಂದು ಅವರು ತಿಳಿಸಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ