ಬೆಂಗಳೂರು,ಡಿ.15- ಕಿಚ್ಚುಗತ್ತಿ ಮಾರಮ್ಮ ದೇಗುಲ ದುರಂತದಲ್ಲಿ ಮಡಿದವರಿಗೆ ಸರ್ಕಾರ ಘೋಷಿಸಿರುವ 5 ಲಕ್ಷ ರೂ. ಪರಿಹಾರದ ಜೊತೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ 1 ಲಕ್ಷ ರೂ.ಪರಿಹಾರ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ದೇಗುಲದಲ್ಲಿ ಪ್ರಸಾದ ಸೇವಿಸಿ 11 ಮಂದಿ ಸಾವನ್ನಪ್ಪಿದ್ದು ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
ಇಂದು ಆಸ್ಪತ್ರೆಗೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ 1 ಲಕ್ಷ ಪರಿಹಾರ ಘೋಷಿಸಿದ್ದಾರೆ.ಇದಕ್ಕೂ ಮುನ್ನ ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ಮುಖಂಡ, ಮಾಜಿ ಸಚಿವ ಎಸ್.ಎ.ರಾಮದಾಸ್ ಅವರು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿ ಆಸರೆ ಟ್ರಸ್ಟ್ ವತಿಯಿಂದ 1ಲಕ್ಷ ರೂ. ಘೋಷಿಸಿದ್ದು ಒಟ್ಟಾರೆ ಮೃತ ವ್ಯಕ್ತಿಗಳ ಕುಟುಂಬಗಳಿಗೆ ತಲಾ 7 ಲಕ್ಷ ರೂ. ಪರಿಹಾರ ಘೋಷಣೆಯಾಗಿದೆ.