ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ 11 ಮಂದಿ ಸಾವನಪ್ಪಿರುವ ಪ್ರಕರಣವನ್ನು ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಬೆಂಗಳೂರು, ಡಿ.15- ಚಾಮರಾಜನಗರ ಜಿಲ್ಲೆಯ ಸುಳವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದ್ದು, ಈಗಾಗಲೇ ಇಬ್ಬರು ಶಂಕಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಇಂದು ಬೆಳಗ್ಗೆ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿದರು.
ಇದೊಂದು ದುರಂತ ಘಟನೆ, ಈ ಘಟನೆ ಸಂಭವಿಸಬಾರದಿತ್ತು. ವಿಷ ಆಹಾರ ಸೇವನೆಯಿಂದ ಸಾವನ್ನಪ್ಪಿರುವ ಕುಟುಂಬದವರಿಗೆ ನೋವು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದರು.

ಘಟನೆ ಅತ್ಯಂತ ಖಂಡನೀಯ.ವಿಷಪಾಷನ ಹೇಗಾಯಿತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.ಅದಕ್ಕೆ ಯಾರು ಕಾರಣ ಎಂಬುದನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು.ಈಗಾಗಲೇ ಇಬ್ಬರು ಶಂಕಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.ಘಟನೆ ಹಿಂದೆ ಯಾರ ಕೈವಾಡ ಇದೆ ಎಂಬುದನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಅವರು ಭರವಸೆ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ