ನವದಹೆಲಿ: ಟೀಂ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್ಮನ್ ಗೌತಮ್ ಗಂಭೀರ್ ಟೀಂ ಇಂಡಿಯಾದ ಕೋಚ್ ರವಿ ಶಾಸ್ತ್ರಿ ಅವರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಕೆಲವು ತಿಂಗಳ ಹಿಂದೆ ಆಂಗ್ಲರ ವಿರುದ್ಧದ ಟೆಸ್ಟ್ ಸರಣಿಯಲ್ಲಿ 1-4 ರನ್ ಅಂತರದಿಂದ ಸೋಲು ಕಂಡಿತ್ತು. ಸರಣಿ ಸೋತ ಹೊರತಾಗಿಯೂ ಕೋಚ್ ರವಿ ಶಾಸ್ತ್ರಿ 15-20 ವರ್ಷಗಳಲ್ಲಿ ನಮ್ಮದು ಅತ್ಯುತ್ತಮ ತಂಡ ಎಂದು ಕೊಹ್ಲಿ ಪಡೆಯನ್ನ ಸಮರ್ಥಿಸಿಕೊಂಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೌತಮ್ ಗಂಭೀರ್ ರವಿ ಶಾಸ್ತ್ರಿ ಅವರ ಮಾತುಗಳನ್ನ ಟೀಕಿಸಿದ್ದಾರೆ. ರವಿ ಶಾಸ್ತ್ರಿ ಅವರು ತಮ್ಮ ವೃತ್ತಿ ಜೀವನದಲ್ಲಿ ಅದೇನು ಸಾಧಿಸಿದ್ದಾರೋ ನನಗೆ ಗೊತ್ತಿಲ್ಲ ಎಂದು ಗಂಭೀರ್ ಟೀಕಿಸಿದ್ದಾರೆ.