
ಬೆಂಗಳೂರು, ಡಿ.16- ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಹಾರೈಸಿದ್ದಾರೆ.
ಇಂದು ಬೆಳಗ್ಗೆ ದೂರವಾಣಿ ಮೂಲಕ ಕುಮಾರಸ್ವಾಮಿ ಅವರನ್ನು ಸಂಪರ್ಕಿಸಿದ ರಾಷ್ಟ್ರಪತಿಗಳು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಸಚಿವ ಸಂಪುಟದ ಬಹುತೇಕ ಸಚಿವರು, ಶಾಸಕರು, ರಾಜಕೀಯ ಮುಖಂಡರು ಮುಖ್ಯಮಂತ್ರಿಗಳಿಗೆ ಶುಭಾಶಯ ಕೋರಿದ್ದಾರೆ.