ಸಿಸಿಬಿ ಪೊಲೀಸರಿಂದ ಕ್ಲಬ್ ಮೇಲೆ ದಾಳಿ 61 ಜನರ ಬಂಧನ:

ಬೆಂಗಳೂರು, ಡಿ.16- ಕ್ಲಬ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಇಸ್ಪೀಟ್ ಆಡುತ್ತಿದ್ದ 61 ಮಂದಿಯನ್ನು ಬಂಧಿಸಿ 1.70 ಲಕ್ಷರೂ. ಹಣ ಹಾಗೂ ಇನ್ನಿತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರ್.ಟಿ.ನಗರ ವ್ಯಾಪ್ತಿಯ ಗಂಗಾನಗರ, ಬಳ್ಳಾರಿ ಮುಖ್ಯರಸ್ತೆಯಲ್ಲಿರುವ ಶ್ರೀ ವಿನಾಯಕ ಕ್ರಿಯೇಷನ್ ಅಸೋಸಿಯೇಷನ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.

ಈ ವೇಳೆ ಹಣವನ್ನು ಪಣವಾಗಿಕಟ್ಟಿಕೊಂಡು ಜೂಜಾಡುತ್ತಿದ್ದವರನ್ನು ವಶಕ್ಕೆ ಪಡೆದು ಪಣಕ್ಕಿಟ್ಟಿದ್ದ 1.70 ಲಕ್ಷರೂ. ಹಣ ಹಾಗೂ ಇನ್ನಿತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಆರ್.ಟಿ.ನಗರಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ