
ಬೆಂಗಳೂರು, ಡಿ.16-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆ ನಡೆಯುವ ರಾಜಸ್ತಾನ ಹಾಗೂ ಮಧ್ಯಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ನಾಳೆ ಬೆಳಗ್ಗೆ ಬೆಂಗಳೂರಿನಿಂದ ರಾಜಸ್ತಾನಕ್ಕೆ ತೆರಳುವ ಮುಖ್ಯಮಂತ್ರಿಗಳು ಜೈಪುರದಲ್ಲಿ ರಾಜಸ್ತಾನದ ನೂತನ ಮುಖ್ಯಮಂತ್ರಿಯಾಗಿ ಅಶೋಕ್ಗೆಲ್ಹೋಟ್ ಅವರು ಪ್ರಮಾಣ ವಚನ ಸ್ವೀಕರಿಸಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಜೈಪುರದಿಂದ ಮಧ್ಯಪ್ರದೇಶದ ಭೂಪಾಲ್ಗೆ ತೆರಳಲಿದ್ದಾರೆ. ಭೂಪಾಲ್ನಲ್ಲಿ ನಡೆಯಲಿರುವ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಕಮಲ್ನಾಥ್ ಅವರು ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.ನಂತರ ನಾಳೆ ಸಂಜೆ ಬೆಂಗಳೂರಿಗೆ ಮರಳುವ ಕಾರ್ಯಕ್ರಮವಿದೆ.
ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು.