ನಾಳೆ ಕರ್ನಾಟಕ ಪ್ರದೇಶ ಮೀನುಗಾರರ ಕಾಂಗ್ರೇಸ್ ಸಮಿತಿಯ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ

ಬೆಂಗಳೂರು,ಡಿ.16- ಕರ್ನಾಟಕ ಪ್ರದೇಶ ಮೀನುಗಾರರ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ನಾಳೆ ಬೆಳಗ್ಗೆ 9.30ಕ್ಕೆ ಕ್ವೀನ್ಸ್ ರಸ್ತೆಯಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ನಡೆಯಲಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಾಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಸಮ್ಮುಖದಲ್ಲಿ ಪದಗ್ರಹಣ ಸಮಾರಂಭ ನಡೆಯುತ್ತಿದ್ದು, ಅಖಿಲ ಭಾರತ ಮೀನುಗಾರ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಯು.ಆರ್.ಸಭಾಪತಿ ಅವರು ನೂತನವಾಗಿ ನೇಮಕಗೊಂಡಿರುವ ಲಿಂಗರಾಜು ಅವರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ