ರಾಜಸ್ಥಾನ ನೂತನ ಸಿಎಂ ಆಗಿ ಅಶೋಕ್ ಗೆಹ್ಲೋಟ್, ಡಿಸಿಎಂ ಆಗಿ ಸಚಿನ್ ಪೈಲಟ್ ಪ್ರತಿಜ್ನಾವಿಧಿ ಸ್ವೀಕಾರ

ಜೈಪುರ: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹಿರಿಯ ನಾಯಕ ಅಶೋಕ್​ ಗೆಹ್ಲೋಟ್​ ಹಾಗೂ ಉಪಮುಖ್ಯಮಂತ್ರಿಯಾಗಿ ಸಚಿನ್​ ಪೈಲಟ್​ ಅವರು ಪ್ರಮಾಣವಚನ ಸ್ವೀಕರಿಸಿದರು.

ಜೈಪುರದಲ್ಲಿರುವ ಐತಿಹಾಸಿಕ ಆಲ್ಬರ್ಟ್​ ಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರತಿಜ್ನಾವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಸೇರಿದಂತೆ ಇತರೆ ಕಾಂಗ್ರೆಸ್​ ನಾಯಕರು ಉಪಸ್ಥಿತರಿದ್ದರು.

ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಗೆಹ್ಲೋಟ್​ ಅವರು ಸಚಿವ ಸಂಪುಟ ನಿರ್ಧರಿಸಿದ ಮೇಲೆ ಸಾರ್ವಜನಿಕ ಹಿತಾಸಕ್ತಿ ಹಾಗೂ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳ ಆದ್ಯತೆ ಮೇಲೆ ಕಾರ್ಯನಿರ್ವಹಿಸುತ್ತೇವೆ ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಸಚಿನ್​ ಪೈಲಟ್​ ಅವರು ಮಾತನಾಡಿ, ಜನರ ನಿರೀಕ್ಷೆಗಳನ್ನು ಮುಟ್ಟುವ ಮಟ್ಟಿಗೆ ಕಾಂಗ್ರೆಸ್​ ಕಾರ್ಯನಿರ್ವಹಿಸಲಿದೆ. ರಾಜ್ಯ ಹಾಗೂ ರಾಜ್ಯದ ಜನರಿಗೆ ಇದೊಂದು ಹೊಸ ಯುಗ ಆರಂಭವಾಗಿದೆ. ಜನರು ನಮ್ಮನ್ನು ನಂಬಿದ್ದಾರೆ. ಇಂದಿನಿಂದಲೇ ನಮ್ಮ ಕಾರ್ಯ ಪ್ರಾರಂಭವಾಗಿದೆ. ಆದಷ್ಟು ಬೇಗ ಸಚಿವ ಸಂಪುಟವನ್ನು ರಚಿಸಿ ನಮ್ಮ ಕೆಲಸದಲ್ಲಿ ತೊಡಗಿಕೊಳ್ಳಬೇಕು ಎಂದು ತಿಳಿಸಿದರು.

Ashok Gehlot, takes oath as Rajasthan CM, Sachin Pilot as deputy CM

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ