ನವದೆಹಲಿ: ಪಂಚರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದು ಒಂದು ವಾರ ಕಳೆದಿದೆ. 5 ರಾಜ್ಯಗಳಲ್ಲಿ 3 ಕಡೆ ಜಯಭೇರಿ ಬಾರಿಸಿದ್ದ ಕಾಂಗ್ರೆಸ್ಗೆ ಇಂದು ವಿಶೇಷವಾದ ದಿನ. ಒಂದರ ನಂತರ ಒಂದು ರಾಜ್ಯಗಳಲ್ಲಿ ಇಂದು ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿಗಳು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ದೇಶದ 3 ಪ್ರಮುಖ ರಾಜ್ಯಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿರುವ ಕಾಂಗ್ರೆಸ್ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಧೂಳೀಪಟ ಮಾಡಿತ್ತು. ಆ ಸಂಭ್ರಮದಲ್ಲಿ ತೇಲುತ್ತಿರುವ ಕಾಂಗ್ರೆಸ್ ನಾಯಕರಿಗೆ ಇಂದು ಮತ್ತೊಂದು ಸಂಭ್ರಮ. ಒಂದೇ ದಿನ ಮೂರು ರಾಜ್ಯಗಳಲ್ಲಿ ಇಂದು ಕಾಂಗ್ರೆಸ್ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದೆ.
ಬಿಜೆಪಿ ವಿರುದ್ಧ ಮಹಾಮೈತ್ರಿ ಮಾಡಿಕೊಂಡಿರುವ ವಿರೋಧಪಕ್ಷಗಳ ನಾಯಕರಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬ ಮಾತು ಕೇಳಿಬರುತ್ತಲೇ ಇದೆ. ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಜೊತೆಗೆ ಕೈಜೋಡಿಸಿರುವ ಪ್ರಾದೇಶಿಕ ಪಕ್ಷಗಳ ನಾಯಕರು ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ಗೆ ಬೆಂಬಲ ಸೂಚಿಸಿದ್ದರು. ಕರ್ನಾಟಕದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವಾಗ ವೇದಿಕೆಯಲ್ಲಿ ಒಂದಾಗಿದ್ದ ತೃತೀಯರಂಗದ ನಾಯಕರು ಈ ಮೂರು ಕಡೆಗಳಲ್ಲೂ ತಮ್ಮ ಶಕ್ತಿ ಪ್ರದರ್ಶಿಸಲಿದ್ದಾರೆ ಎನ್ನಲಾಗಿತ್ತು.
ರಾಜಸ್ಥಾನ,ಮಧ್ಯಪ್ರದೇಶದಲ್ಲಿ ನಾಳೆ ಪ್ರಮಾಣವಚನ ಸ್ವೀಕರಿಸಲಿರುವ ಅಶೋಕ್ ಗೆಹ್ಲೋಟ್, ಕಮಲ್ ನಾಥ್,ಯುವ ನಾಯಕ ಸಚಿನ್ ಪೈಲಟ್ ಅವರಿಗೆ ನನ್ನ ಶುಭಾಶಯ. ಮುಖ್ಯವಾಗಿ ನಾಳೆ ನಡೆಯಲಿರುವ ಸಮಾರಂಭಗಳು ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ್ದು.ದೇಶದಲ್ಲಿ ನಮ್ಮನ್ನು ಬಿಟ್ಟರೆ ಮತ್ತೊಬ್ಬರಿಲ್ಲ ಎನ್ನುವವರಿಗೆ ಸ್ಪಷ್ಟ.