ಭೋಪಾಲ್: ಮಧ್ಯಪ್ರದೇಶದ 18 ನೇ ಮುಖ್ಯಮಂತ್ರಿಯಾಗಿ ಕಮಲ್ನಾಥ್ ಪ್ರಮಾಣ ವಚನ ಸ್ವೀಕರಿಸಿದರು.
ರಾಜಧಾನಿ ಭೋಪಾಲ್ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರು ಕಮಲ್ ನಾಥ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಸೇರಿದಂತೆ ವಿರೋಧ ಪಕ್ಷಗಳ ಪ್ರಮುಖ ನಾಯಕರು ಪಾಲ್ಗೊಂಡು ಒಗ್ಗಟ್ಟು ಪ್ರದರ್ಶಿಸಿದರು.
Madhyapradesh,Congress,Kamal nath,Swearing ceremony