ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ, ಸಮವಸ್ತ್ರ ಮತ್ತು ಸೈಕಲ್ ವಿತರಣೆಯಲ್ಲಿ ವಿಳಂಬ, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ

ಬೆಳಗಾವಿ, ಡಿ.18-ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ, ಸಮವಸ್ತ್ರ, ಸೈಕಲ್ ವಿತರಣೆಯಲ್ಲಿ ವಿಳಂಬವಾಗುತ್ತಿರುವ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ ಒಳಗೆ ಟೆಂಡರ್ ಕರೆದು ಗುತ್ತಿಗೆದಾರರಿಗೆ ಟೆಂಡರ್ ನೀಡಬೇಕು. ಮೇ 15ರೊಳಗೆ ಎಲ್ಲ ಕಾರ್ಯ ಪೂರ್ಣಗೊಳಿಸಬೇಕು. ಆದರೆ, ಈವರೆಗೆ ಯಾವುದೇ ಕಾರ್ಯ ನಡೆದಿಲ್ಲ. ಜನವರಿ ನಂತರ ಅಧಿಕಾರಿಗಳು ಪರೀಕ್ಷೆಯ ಕಾರ್ಯದ ಒತ್ತಡದಲ್ಲಿರುತ್ತಾರೆ ಎಂದರು.

ಶಿಕ್ಷಣ ಸಚಿವರು ರಾಜೀನಾಮೆ ನೀಡಿ ಎರಡು ತಿಂಗಳಾಗಿದೆ. ಶಿಕ್ಷಣ ಖಾತೆ ಮುಖ್ಯಮಂತ್ರಿಗಳ ಬಳಿ ಇದೆ. ಈವರೆಗೆ ಪುಸ್ತಕ, ಸಮವಸ್ತ್ರಗಳನ್ನು ಕೊಟ್ಟಿಲ್ಲ. ಕಳಪೆ ಸೈಕಲ್‍ಗಳನ್ನು ವಿತರಣೆ ಮಾಡಿದ್ದಾರೆ. ಶಿಕ್ಷಣ ಇಲಾಖೆ ಕೆಲಸ ದೇವರ ಕೆಲಸ. ಮಕ್ಕಳನ್ನು ದೇವರೆಂದು ತಿಳಿದು ಕೆಲಸ ಮಾಡಬೇಕು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಅದ್ವಾನಗಳಾಗುತ್ತಿವೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ