![H.K.Patil](http://kannada.vartamitra.com/wp-content/uploads/2018/03/H.K.Patil_-e1520002986752.jpg)
ಬೆಳಗಾವಿ,ಡಿ-18:ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರು, ಉತ್ತರ ಕರ್ನಾಟಕದ ನಾಯಕರನ್ನು 2ನೇ ದರ್ಜೆ ನಾಯಕರು ಎನ್ನುವವರಿಗೆ ಏನು ಹೇಳಬೇಕು ಗೊತ್ತಿಲ್ಲ. ಒಂದು ವೇಳೆ ಹಾಗೆ ಭಾವಿಸಿದರೆ ಪಶ್ಚಾತ್ತಾಪ ಪಡಬೇಕಾಗುತ್ತದೆ.
ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ಮಾಡುತ್ತೇವೆ. ಆದರೂ ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದರು.
ಉತ್ತರ ಕರ್ನಾಟಕ ಭಾಗದವರಿಗೂ ಆದ್ಯತೆ ಸಿಗಬೇಕೆಂಬುದು ನಮ್ಮ ಆಶಯವಾಗಿದೆ. ಈ ಭಾಗದವರನ್ನು ಕಡೆಗಣಿಸುವುದು ಬೇಡ ಎಂಬ ಪರೋಕ್ಷ ಎಚ್ಚರಿಕೆಯನ್ನು ನೀಡಿದರು.