ಬೆಂಗಳೂರು,ಡಿ.18- ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಕಾಂಗ್ರೆಸ್ ಪಾಳೆಯದಲ್ಲಿ ಒಂದಲ್ಲಒಂದು ಸಮಸ್ಯೆ ತಲೆದೋರುತ್ತಲೇ ಇದ್ದು, ಇದೀಗ ಮಾಜಿ ಶಾಸಕರು ಬಲಪ್ರದರ್ಶನಕ್ಕೆ ಮುಂದಾಗಿದ್ದು, ಕಾಂಗ್ರೆಸ್ಗೆ ತಲೆನೋವಾಗಿ ಪರಿಣಮಿಸಿದೆ.
ಇಂದು ಮಾಜಿ ಶಾಸಕ ಚೆಲುವರಾಯ ಸ್ವಾಮಿ ನೇತೃತ್ವದಲ್ಲಿ ಸುಮಾರು 20ಕ್ಕೂ ಹೆಚ್ಚು ಮಾಜಿ ಶಾಸಕರು ಸಭೆ ಸೇರುವ ಮೂಲಕ ಕಾಂಗ್ರೆಸ್ಗೆಟಾಂಗ್ ನೀಡಲಿದ್ದಾರೆ.
ಸರ್ಕಾರದಲ್ಲಿಕಾಂಗ್ರೆಸ್ ಶಾಸಕರು, ಕಾರ್ಯಕರ್ತರಯಾವ ಕೆಲಸಗಳೂ ಆಗುತ್ತಿಲ್ಲ. ಜೆಡಿಎಸ್ ಕಾಂಗ್ರೆಸ್ಸಿಗರನ್ನು ಮಲತಾಯಿ ಮಕ್ಕಳಂತೆ ಕಾಣುತ್ತಿದ್ದಾರೆ.ಇದು ಹೀಗೆ ಮುಂದುವರೆದರೆ ಕಾಂಗ್ರೆಸ್ ಕಾರ್ಯಕರ್ತರು ಆತ್ಮಸ್ಥೈರ್ಯ ಕಳೆದುಕೊಂಡು ಪಕ್ಷ ಸಂಘಟನೆಗೆ ಹಿನ್ನಡೆಯುಂಟಾಗುವ ಸಾಧ್ಯತೆ ಇದೆ ಎಂಬುದು ಮಾಜಿ ಶಾಸಕರ ಅಳಲು.
ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಎದುರಾಗುತ್ತಿದ್ದು, ಮೈತ್ರಿ ಅಭ್ಯರ್ಥಿಗಳ ಆಯ್ಕೆಗೆ ದೋಸ್ತಿ ಪಕ್ಷಗಳ ಮುಖಂಡರು ಕಸರತ್ತು ನಡೆಸುತ್ತಿದ್ದಾರೆ. ಮಾಜಿ ಶಾಸಕರಲ್ಲಿ ಕೆಲವರು ಸ್ಪರ್ಧಾಕಾಂಕ್ಷಿಗಳಾಗಿದ್ದು, ಟಿಕೆಟ್ ಪಡೆಯುವ ಹಿನ್ನೆಲೆಯಲ್ಲಿತಮ್ಮ ಬಲ ಪ್ರದರ್ಶನಕ್ಕೆ ಈ ಮೂಲಕ ಮುಂದಾಗಿದ್ದಾರೆ.
ಮುಖ್ಯವಾಗಿ ಮಂಡ್ಯಕ್ಷೇತ್ರವನ್ನುಜೆಡಿಎಸ್ಗೆ ಬಿಟ್ಟುಕೊಟ್ಟರೆ ಈ ಕ್ಷೇತ್ರದಲ್ಲಿಕಾಂಗ್ರೆಸ್ನ ಅಸ್ತಿತ್ವವೇ ಇಲ್ಲದಂತಾಗುತ್ತದೆ.ಅಷ್ಟೇ ಅಲ್ಲದೇ ಹಳೆ ಮೈಸೂರು ಭಾಗದಲ್ಲೂ ಪಕ್ಷ ಸಂಘಟನೆಗೆ ಹೊಡೆತ ಬೀಳುತ್ತದೆ.
ಇನ್ನೂ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ ವಿಚಾರ ಸಂಬಂಧವೂ ಸಭೆಯಲ್ಲಿಚರ್ಚೆಯಾಗಲಿದ್ದು, ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿ, ಸೂಕ್ತ ಪ್ರಾತಿನಿಧ್ಯಕ್ಕೂ ಮಾಜಿ ಶಾಸಕರ ನಿಯೋಗಒತ್ತಾಯಿಸುತ್ತಿದೆ.
ಚುನಾವಣೆಯಲ್ಲಿ ಸೋಲುಂಡಿರುವ ಮುಖಂಡರು ಯಾವುದೇ ಅಧಿಕಾರವಿಲ್ಲದೇ ತಮ್ಮ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡುವುದು ಕಷ್ಟಕರವಾಗಿದೆ. ಕಾರ್ಯಕರ್ತರು ಸಹ ಉತ್ಸಾಹ ಕಳೆದುಕೊಳ್ಳುವ ಭೀತಿಎದುರಾಗಿದ್ದು, ಈ ಎಲ್ಲಾ ಸಮಸ್ಯೆಗಳ ಕುರಿತು ಸಭೆಯಲ್ಲಿಚರ್ಚೆ ನಡೆಸಿ ಆ ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರಿಗೆ ಮನವರಿಕೆ ಮಾಡಿಕೊಡುವುದಾಗಿ ಚೆಲುವರಾಯ ಸ್ವಾಮಿ ತಿಳಿಸಿದ್ದಾರೆ.
ಒಂದೆಡೆ ಸಚಿವಾಕಾಂಕ್ಷಿಗಳು ಸಂಪುಟ ವಿಸ್ತರಣೆಗೆಒತ್ತಡ ಹೇರುತ್ತಿದ್ದರೆ, ಮತ್ತೊಂದೆಡೆ ಸಚಿವ ಸ್ಥಾನ ವಂಚಿತ ಹಿರಿಯ ಮುಖಂಡರು ಲಾಬಿ ನಡೆಸುತ್ತಿದ್ದಾರೆ.ಮಾಜಿ ಮಾಜಿ ಶಾಸಕರ ಸರದಿ.
ಮಾಜಿ ಶಾಸಕರಾದ ಚೆಲುವರಾಯ ಸ್ವಾಮಿ, ಎ.ಮಂಜು, ಬಾಲಕೃಷ್ಣ ಸೇರಿದಂತೆ 20ಕ್ಕೂ ಹೆಚ್ಚು ಮಾಜಿ ಶಾಸಕರು ಖಾಸಗಿ ಹೋಟೆಲ್ನಲ್ಲಿಂದು ಸಭೆ ಸೇರುತ್ತಿರುವುದು ಕುತೂಹಲ ಕೆರಳಿಸಿದ್ದು, ಕಾಂಗ್ರೆಸ್ ಪಕ್ಷಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇಇಂತಹ ಬೆಳವಣಿಗೆ ಪಕ್ಷಕ್ಕೆ ಬಿಸಿತುಪ್ಪವಾಗಿದೆ.