ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 9 ಮಂದಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರು, ಡಿ.19- ಪೂರ್ವ ವಿಭಾಗದ ಹೆಣ್ಣೂರು ಠಾಣೆ ಪೊಲೀಸರು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 9 ಮಂದಿಯನ್ನು ಬಂಧಿಸಿ 82.50 ಲಕ್ಷರೂ.ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, 3 ದ್ವಿಚಕ್ರ ವಾಹನ, ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ರಾಮಮೂರ್ತಿನಗರ ಠಾಣೆ ಪೊಲೀಸರು ಐದು ಮಂದಿಯನ್ನು ಬಂಧಿಸಿ 47.64 ಲಕ್ಷರೂ.ಮೌಲ್ಯದ ಮಾಲನ್ನು ವಶಪಡಿಸಿಕೊಂಡರೆ, ಹೆಣ್ಣೂರುಠಾಣೆ ಪೊಲೀಸರು ಕುಖ್ಯಾತ ಸರಗಳ್ಳನನ್ನು ಬಂಧಿಸಿ 15 ಲಕ್ಷ ಬೆಲೆಬಾಳುವ ಸರಗಳು ಹಾಗೂ ಸ್ಕೂಟರ್‍ ಅನ್ನು ವಶಪಡಿಸಿಕೊಂಡಿದ್ದಾರೆ.

ಜೆಬಿ ನಗರಠಾಣೆ ಪೊಲೀಸರು ಐದು ಮಂದಿಯನ್ನು ಬಂಧಿಸಿ ಕನ್ನಗಳವು ಪ್ರಕರಣಕ್ಕೆ ಸಂಬಂಧಿಸಿದಂತೆ 19.83 ಲಕ್ಷ ಬೆಲೆಬಾಳುವ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ