ಬೆಂಗಳೂರು, ಡಿ.19- ಸಾರ್ವಜನಿಕ ಸ್ಥಳದಲ್ಲಿ ಸಿಐಡಿ ಇನ್ಸ್ಪೆಕ್ಟರ್ ಒಬ್ಬರ ಮೇಲೆ ಮೂವರು ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ಶನಿವಾರ ಚಾಮರಾಜಪೇಟೆ ಸಮೀಪ ಸಿಐಡಿ ಇನ್ಸ್ಪೆಕ್ಟರ್ ಕಾಶಿನಾಥ್ ಅವರ ಮೇಲೆ ಹಲ್ಲೆ ನಡೆದಿದೆ.
ಬಸಪ್ಪ, ಆತನ ಪತ್ನಿ ಹಾಗೂ ರಾಮಲಿಂಗಪ್ಪಎಂಬುವವರು ಶನಿವಾರ ಸಂಜೆ ಏಕಾಏಕಿ ಕಾಶಿನಾಥ್ ಅವರನ್ನುಅಡ್ಡಗಟ್ಟಿ ಸಾರ್ವಜನಿಕರೆದುರೇ ಹಲ್ಲೆ ನಡೆಸಿದ್ದಾರೆ.
ಪೊಲೀಸ್ ಇನ್ಸ್ಪೆಕ್ಟರ್ ಮೇಲೆ ಮೂವರು ಹಲ್ಲೆ ನಡೆಸುತ್ತಿದ್ದರೂ ಸ್ಥಳೀಯರ್ಯಾರೂ ಅವರನ್ನು ಬಿಡಿಸಿಕೊಳ್ಳಲು ಮುಂದಾಗಲಿಲ್ಲ. ಆದರೆ, ಪೊಲೀಸರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಮೂಕವಿಸ್ಮಿತರಾಗಿ ನೋಡುತ್ತಿದ್ದರು.
ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಕಾಶಿನಾಥ್ ಅವರ ಮೇಲೆ ಹಲ್ಲೆ ನಡೆಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಕುರಿತಂತೆ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.