ಬೆಂಗಳೂರು,ಡಿ.20- ಫತಾಯಿ ಚಂಡಮಾರುತದ ಪರಿಣಾಮದಿಂದ ರಾಜ್ಯದಲ್ಲಿ ಚಳಿ ಹೆಚ್ಚಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 8, 10, 11 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬಂಗಾಳಕೊಲ್ಲಿಯಲ್ಲಿರುವ ಉಂಟಾಗಿರುವ ಫೆಥೈ ಚಂಡಮಾರುತದ ಪರಿಣಾಮದಿಂದ ರಾಜ್ಯದ ಮಡಿಕೇರಿ, ಆಗುಂಬೆ, ಹಾಸನ, ಬೀದರ್, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹವಾಮಾನ ತೀರಾ ಕುಸಿದಿದೆ.
ಹವಾಮಾನ ಇಲಾಖೆಯ ವರದಿಯಂತೆ, ಮಡಿಕೇರಿಯಲ್ಲಿ 8.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ವಾಡಿಕೆಗಿಂತ 4.2 ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆ. ವಿಜಯಪುರದಲ್ಲಿ 9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದ್ದು, ವಾಡಿಕೆಗಿಂತ 6.1 ಡಿಗ್ರಿ ಸೆಲ್ಸಿಯಸ್ ಕಡಿಮೆ ಇದೆ.
ಇನ್ನು ಕೆಲವೇ ದಿನಗಳಲ್ಲಿ ಚಳಿಗಾಲದಲ್ಲಿ ವಾಡಿಕೆಯಂತೆ ಕಂಡುಬರುವ ತಾಪಮಾನ ದಾಖಲಾಗಲಿದೆ, ಎಂದು ಕೇಂದ್ರದ ವಿಜ್ಞಾನಿ ಎಸ್ಎಸ್ಎಂ ಗವಾಸ್ಕರ್ ತಿಳಿಸಿದ್ದಾರೆ.