
ಬೆಂಗಳೂರು, ಡಿ.20-ಈ ಬಾರಿ ಧಾರವಾಡದಲ್ಲಿ ನಡೆಯುತ್ತಿರುವ 84ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗೈದವರನ್ನು ಗೌರವಿಸುವ ಪರಂಪರೆಯಂತೆ ನಟಿ ತಾರಾ ಅನುರಾಧ ಅವರನ್ನು ಸನ್ಮಾನಿಸಲಾಗುತ್ತಿದೆ.
ಜನವರಿ 4ರಿಂದ 6ರವರೆಗೆ 3 ದಿನಗಳ ಕಾಲ ನಡೆಯುವ ಸಮ್ಮೇಳನ ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕøತರಾದ ಡಾ.ಚಂದ್ರಶೇಖರ ಕಂಬಾರ ಅವರ ಅಧ್ಯಕ್ಷತೆಯಲ್ಲಿ ಜರುಗಲಿದ್ದು, ಜ.6 ರಂದು ನಡೆಯುವ ಕಾರ್ಯಕ್ರಮದಲ್ಲಿ ನಟಿ ತಾರಾ ಅನುರಾಧ ಅವರನ್ನು ಸನ್ಮಾನಿಸಲಾಗುವುದು ಎಂದು ಕಸಾಪ ಅಧ್ಯಕ್ಷ ಮನುಬಳಿಗಾರ್ ತಿಳಿಸಿದ್ದಾರೆ.