ಬೆಂಗಳೂರು, ಡಿ.22-ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆಯಲಿರುವ ಕಾರ್ಯಕ್ರಮದ ಅಂಗವಾಗಿ ರಾಜಭವನಕ್ಕೆ ಬಿಗಿ ಪೆÇಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.
ರಾಜ್ಯಪಾಲ ವಜೂಭಾಯಿವಾಲಾ ಇಂದು ರಾಜಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳು ನಡೆದಿರುವ ಬೆನ್ನಲ್ಲೇ ರಾಜಭವನ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಸೂಕ್ತ ಬಂದೋಬಸ್ತ್ ಮಾಡಲಾಗಿದೆ.
ರಾಜಭವನ ರಸ್ತೆಯ ಎರಡೂ ಕಡೆಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ಬರುವವರನ್ನು ಒಳಬಿಡಲು, ಅದರಲ್ಲೂ ವಿಐಪಿಗಳು ಮತ್ತಿತರರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಾಕಷ್ಟು ಪೆÇಲೀಸ್ ಪಡೆಯನ್ನು ನಿಯೋಜಿಸಿ ಭದ್ರತೆ ಒದಗಿಸಲಾಗಿದೆ.
ಸಂಪುಟದಿಂದ ರಮೇಶ್ ಜಾರಕಿ ಹೊಳಿ ಮತ್ತು ಶಂಕರ್ ಅವರನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಬೆಂಬಲಿಗರ ಅಸಮಾಧಾನ, ಕಾರ್ಯಕರ್ತರ ಆಕ್ರೋಶದಿಂದ ಸ್ಥಳದಲ್ಲಿ ಉಂಟಾಗಬಹುದಾದ ಗದ್ದಲ, ಗೊಂದಲವನ್ನು ನಿವಾರಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮ ವಹಿಸಲಾಗಿದೆ.