ಬೆಂಗಳೂರು, ಡಿ.22- ಸಂಪುಟದಿಂದ ಕೈಬಿಟ್ಟಿದ್ದಕ್ಕೆ ನನಗೆ ತೀವ್ರ ಬೇಸರವಾಗಿದೆ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಆರ್.ಶಂಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆ ಸಂದರ್ಭದಲ್ಲಿ ನಾನು ಕಾಂಗ್ರೆಸ್ ಪರವಾಗಿ ಗಟ್ಟಿಯಾಗಿ ನಿಂತಿದ್ದೆ. ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂದು ಹೇಳಿದ್ದರೂ ಕೂಡ ನನ್ನ ಗಮನಕ್ಕೆ ಬಾರದೆ ಸಂಪುಟದಿಂದ ಕೈಬಿಟ್ಟಿದ್ದಕ್ಕೆ ನನಗೆ ಬೇಸರವಾಗಿದೆ. ನಾನು ಅರಣ್ಯ ಸಚಿವನಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ, ಸರ್ಕಾರ ರಚನೆ ಸಂದರ್ಭದಲ್ಲಿ ಕೈ ಹಿಡಿದಿದ್ದೇನೆ. ಬೆಂಬಲ ನೀಡಿದ ನನ್ನನ್ನು ದೂರ ಇಟ್ಟಿರುವುದು ಎಷ್ಟು ಸರಿ? ನಾನು ಯಾವ ಬಿಜೆಪಿ ನಾಯಕರನ್ನೂ ಭೇಟಿ ಮಾಡಿಲ್ಲ. ನನ್ನನ್ನು ಏಕೆ ಸಂಪುಟದಿಂದ ಕೈ ಬಿಟ್ಟಿದ್ದಾರೆ ಎಂದು ಕೇಳುತ್ತೇನೆ. ಸಂಪುಟದಿಂದ ಕೈಬಿಟ್ಟ ಬಗ್ಗೆ ನನಗೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಹೇಳಿದರು.
ನನ್ನ ಮುಂದಿನ ನಡೆ ಬಗ್ಗೆ ನಾನು ಈಗಲೇ ಏನೂ ಹೇಳುವುದಿಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ಸಂಪುಟದಿಂದ ಕೈಬಿಟ್ಟಿದ್ದಕ್ಕೆ ಸಕಾರಣ ನೀಡಬೇಕು ಎಂದರು.