ಬೆಂಗಳೂರು,ಡಿ.22- ಬಿಟಿಎಂ ವಿಧಾನ ಸಭಾ ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಯಾವುದೇ ತಂತ್ರ ಅನುಸರಿಸದೇ ತಟಸ್ಥವಾಗಿರಲು ರಾಮಲಿಂಗಾರೆಡ್ಡಿ ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಇದರಿಂದ ಬಿಜೆಪಿಗೆ ವರವಾಗುವ ಸಾಧ್ಯತೆ ಇದೆ.
ರಾಮಲಿಂಗಾರೆಡ್ಡಿಯವರಿಗೆ ಸಚಿವ ಸ್ಥಾನ ಕೈ ತಪ್ಪಿದ್ದರಿಂದ ಬೆಂಗಳೂರಿನಲ್ಲಿ ಪಕ್ಷ ಸಂಘಟನೆಗೆ ತೀವ್ರ ಹಿನ್ನಡೆಯಾಗಲಿದೆ.
ಬಿಬಿಎಂಪಿ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ರಾಮಲಿಂಗಾರೆಡ್ಡಿ ಚುನಾವಣಾ ತಂತ್ರ ಅನುಸರಿಸಿ ಸಾಕಷ್ಟು ಬಾರಿ ಆಡಳಿವನ್ನು ಕಾಂಗ್ರೆಸ್ ಪಕ್ಷಕ್ಕೆ ದಕ್ಕಿಸಿಕೊಡುವಲ್ಲಿ ಯಶಸ್ಸು ಕಾಣುತ್ತಿದ್ದರು.
ಅಷ್ಟೇ ಅಲ್ಲದೇ ನಗರದಲ್ಲಿ ಪಕ್ಷ ಸಂಘಟನೆಗೆ ಸಾಕಷ್ಟು ದುಡಿದಿದ್ದರು. 7 ಬಾರಿ ಶಾಸಕರಾಗಿರುವ ಇವರಿಗೆ ಸಚಿವ ಸ್ಥಾನ ಕೈತಪ್ಪಿರುವುದು ಬೆಂಗಳೂರಿನಲ್ಲಿ ಪಕ್ಷ ಸಂಘಟನೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎನ್ನಲಾಗಿದೆ.
ಸದ್ಯದಲ್ಲೇ ಲೋಕಸಭಾ ಚುನಾವಣೆ ಎದುರಾಗುತ್ತಿದ್ದ, ಬೆಂಗಳೂರು ಕೇಂದ್ರ, ಉತ್ತರ, ದಕ್ಷಿಣ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ರಾಮಲಿಂಗಾರೆಡ್ಡಿಯವರ ತನ್ನದೇ ಆದ ಪ್ರಭಾವವನ್ನು ಹೊಂದಿದ್ದರೂ ಕೂಡ ಹೈ ಕಮಾಂಡ್ ಅವರನ್ನು ಕಡೆಗಣಿಸಿರುವುದು ಪಕ್ಷದ ಗೆಲುವಿನ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕು.
ಬಾಕ್ಸ್
ರಮೇಶ್ ಜಾರಕಿಹೊಳಿ ನಡೆ ನಿಗೂಢ
ಬೆಂಗಳೂರು,ಡಿ.22- ಬೆಳಗಾವಿ ರಾಜಕೀಯದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಹಸ್ತಕ್ಷೇಪ ವಿರೋಧಿಸಿ ಸಚಿವರಾಗಿದ್ದುಕೊಂಡೇ ಕಾಂಗ್ರೆಸ್ ಪಕ್ಷಕ್ಕೆ ಸಡ್ಡು ಹೊಡೆಯುತ್ತಿದ್ದ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನದಿಂದ ಕೊಕ್ ನೀಡಲಾಗಿದೆ.