
ಚಾಮರನಗರ: ಸುಳ್ವಾಡಿ ವಿಷ ಪ್ರಸಾದ ಪ್ರಕರಣದಲ್ಲಿ ಬಂಧಿತರಾಗಿ ಪೊಲೀಸರ ವಶದಲ್ಲಿದ್ದ ನಾಲ್ವರು ಆರೋಪಿಗಳನ್ನು ರಾತ್ರೋರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.
4 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ವಿಚಾರಣೆ ಮುಕ್ತಾಯವಾಗಿದ್ದರಿಂದ 1 ದಿನ ಮುಂಚಿತವಾಗಿಯೇ ಇಮ್ಮಡಿ ಮಹಾದೇವಸ್ವಾಮಿ, ಅಂಬಿಕಾ, ಮಾದೇಶ್ ಮತ್ತು ದೊಡ್ಡಯ್ಯನನ್ನು ಕೊಳ್ಳೇಗಾಲ ಜೆಎಂಎಫ್ಸಿ ನ್ಯಾಯಾಧೀಶ ಶ್ರೀಕಾಂತ್ ನಿವಾಸದಲ್ಲಿ ಹಾಜರುಪಡಿಸಲಾಯಿತು.
ಆರೋಪಿಗಳಿಗೆ ಜ.3 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ನಾಲ್ವರು ಆರೋಪಿಗಳನ್ನು ಮೈಸೂರಿನ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಎಎಸ್ಪಿ ಗೀತಾ ಪ್ರಸನ್ನ ತಿಳಿಸಿದ್ದಾರೆ.