ಮೇಕೆದಾಟು ಯೋಜನೆಯಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ಕುಡಿಯುವ ನೀರು ಹರಿಸುವಂತೆ ವಿವಿಧ ಸಂಘಟನೆಗಳ ಒತ್ತಾಯ

ಬೆಂಗಳೂರು, ಡಿ.22-ಮೇಕೆದಾಟು ಯೋಜನೆಯಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ಶುದ್ಧ ಕುಡಿಯುವ ನೀರು ಹರಿಸುವಂತೆ ನೀರಾವರಿ ಹೋರಾಟ ಸಮಿತಿ, ಕನ್ನಡ ರೈತ, ಅಹಿಂದ ಮತ್ತು ಪ್ರಗತಿಪರ ಸಂಘಟನೆಗಳು ಒತ್ತಾಯಿಸಿವೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೀರಾವರಿ ಹೋರಾಟ ಸಮಿತಿಯ ಕೋಲಾರ ಜಿಲ್ಲಾಧ್ಯಕ್ಷ ಕುರುಬರಪೇಟೆ ವೆಂಕಟೇಶ್, ನಮ್ಮ ಜಿಲ್ಲೆಗಳಿಂದ ರಾಜ್ಯಕ್ಕೆ ಚಿನ್ನ, ರೇಷ್ಮೆ, ಹಾಲು, ಹಣ್ಣು-ಹಂಪಲು,ತರಕಾರಿ ಯಥೇಚ್ಛವಾಗಿ ಸಿಗುವಂತಾಗಿದೆ. ಆದರೂ ಸರ್ಕಾರ ಈ ಭಾಗಕ್ಕೆ ಶುದ್ಧ ಕುಡಿಯುವ ನೀರು ಒದಗಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ನಮ್ಮ ಜಿಲ್ಲೆಗಳಿಗೆ ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿಯಿಂದ ಬರುವ ಕಲುಷಿತ ನೀರನ್ನೇ ವ್ಯವಸಾಯ ಸೇರಿದಂತೆ ಎಲ್ಲೆಡೆ ಬಳಸಬೇಕಾಗಿರುವುದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆ ಮೂಲಕ ನೀರು ಹರಿಸಲು ಕ್ರಮವಹಿಸಬೇಕೆಂದು ಒತ್ತಾಯಿಸಿದರು.

ಮೇಕೆ ದಾಟು ಯೋಜನೆಯಡಿ 60 ಟಿಎಂಸಿ ನೀರು ಸಂಗ್ರಹಿಸುವ ಗುರಿ ಇದೆ. ಇದರಲ್ಲಿ ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ