ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿಗೆ ಸಿಆರ್ ಪಿಎಫ್ ನ 6 ಯೋಧರಿಗೆ ಗಾಯ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರೆದಿದ್ದು, ಭದ್ರತಾ ಪಡೆಗಳು ಉಗ್ರರ ವಿರುದ್ಧದ ಕಾರ್ಯಾಚರಣೆ ತೀವ್ರ ಗೊಳಿಸಿದ್ದಾರೆ. ಆದಾಗ್ಯೂ ತಮ್ಮ ಅಟ್ಟಹಾಸ ಮುಂದುವರೆಸಿರುವ ಉಗ್ರರು ದಕ್ಷಿಣ ಕಾಶ್ಮೀರದ ಅನಂತ್ ನಾಗ್ ನಲ್ಲಿ ಗ್ರೆನೇಡ್ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 6 ಯೋಧರಿಗೆ ಗಾಯಗಳಾಗಿವೆ.

ಪುಲ್ವಾಮದಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಆರು ಉಗ್ರರನ್ನು ಯೋಧರು ಸದೆಬಡಿದ ಕೆಲವು ಗಂಟೆಗಳ ನಂತರ, ಅನಂತ್‍ನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರು ಪ್ರಬಲ ಗ್ರೆನೇಡ್ ದಾಳಿ ನಡೆಸಿದ್ದಾರೆ. ಕೇಂದ್ರೀಯ ಸಶಸ್ತ್ರ ಮೀಸಲು ಪೊಲೀಸ್ ಪಡೆ(ಸಿಆರ್‍ಪಿಎಫ್) ಕನಿಷ್ಠ ಆರು ಸಿಬ್ಬಂದಿ ತೀವ್ರ ಗಾಯಗೊಂಡಿದ್ದಾರೆ.

ಅನಂತನಾಗ್ ಜಿಲ್ಲೆಯ ಅರ್ವನಿ ಎಂಬಲ್ಲಿ ಸಿಆರ್‍ಪಿಎಫ್ ಯೋಧರ ಮೇಲೆ ಈ ಗ್ರೆನೇಡ್ ದಾಳಿ ನಡೆದಿದೆ. ಗಾಯಗೊಂಡ ಎಲ್ಲ ಯೋಧರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ.

ಉಗ್ರರಿಗಾಗಿ ಯೋಧರು ಶೋಧ ನಡೆಸುತ್ತಿದ್ದ ಸಂದರ್ಭದಲ್ಲೇ ಮರೆಯಲ್ಲಿ ಅಡಗಿದ್ದ ಭಯೋತ್ಪಾದರು ಸಿಆರ್‍ಪಿಎಫ್ ಸಿಬ್ಬಂದಿ ಮೇಲೆ ಗ್ರೆನೇಡ್ ಎಸೆದರು. ಅದು ಸ್ಫೋಟಗೊಂಡು ಆರು ಮಂದಿಗೆ ಗಾಯಗಳಾಗಿವೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ಹೇಳಿದ್ದಾರೆ.

Jammu-kashmir,ananthnag,grenade-attack,6-crpf-men-1-cop-injured

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ