ಗೊಂದಿಯಾ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ 40 ಹಾಗೂ ಎನ್ ಸಿಪಿ 48 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ಎರಡೂ ಪಕ್ಷಗಳು ಪರಸ್ಪರ ಒಪ್ಪಂದ ಮಾಡಿಕೊಂಡಿವೆ.
ಈ ಕುರಿತು ಮಾಹಿತಿ ನೀಡಿರುವ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್, ಮಹಾರಾಷ್ಟ್ರದಲ್ಲಿ ಎನ್ ಸಿಪಿ ಹಾಗೂ ಕಾಂಗ್ರೆಸ್ ಒಟ್ಟಾಗಿ ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸುವುದಾಗಿ ತಿಳಿಸಿದ್ದಾರೆ.
40 ಕ್ಷೇತ್ರಗಳ ಹಂಚಿಕೆ ಪೂರ್ಣಗೊಂಡಿದೆ. ಇನ್ನೂ 8 ಕುರಿತು ಬಾಕಿ ಉಳಿದಿವೆ. ಒಂದು ವೇಳೆ ಈ ಕ್ಷೇತ್ರಗಳ ಬಗ್ಗೆ ಒಮ್ಮತ ಮೂಡದಿದ್ದಲ್ಲಿ ದೆಹಲಿಯಲ್ಲಿ ಉಭಯ ಪಕ್ಷಗಳ ಮುಖ್ಯಸ್ಥರು ಚರ್ಚೆ ಮಾಡುವ ಮೂಲಕ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
2014 ರಲ್ಲಿ ನಡೆದಿದ್ದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷ 27 ಹಾಗೂ ಎನ್ ಸಿಪಿ 21 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದವು.
Lok Sabha elections 2019,Maharashtra,Congress,NCP,