ಬಿಜೆಪಿ ಹಾಗೂ ಕಾಂಗ್ರೆಸ್ಸೇತರ ರಂಗ ರಚನೆ ಕುರಿತು ಶೀಘ್ರ ಸ್ಪಷ್ಟ ನಿರ್ಧಾರ: ಕೆಸಿಆರ್

ಕೋಲ್ಕತಾ: ತೆಲಂಗಾಣ ಮುಖ್ಯಮಂತ್ರಿ, ಟಿಆರ್ ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ್ ರಾವ್ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿಯವರನ್ನು ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಸಿಆರ್, ಫೆಡರಲ್ ಫ್ರಂಟ್ ರಚಿಸುವ ಮಾತುಕತೆ ಮುಂದುವರೆಯಲಿದೆ. ಈ ಕುರಿತು ಶೀಘ್ರದಲ್ಲೇ ಸ್ಪಷ್ಟ ನಿರ್ಧಾರಕ್ಕೆ ಬರಲಾಗುವುಗುವುದು. ಬಿಜೆಪಿ ಹಾಗೂ ಕಾಂಗ್ರೆಸ್ ಹೊರತಾದ ಮೈತ್ರಿಕೂಟ ರಚನೆಯ ನನ್ನ ಪ್ರಯತ್ನ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಇದು ದೇಶಾದ್ಯಂತ ಎಲ್ಲ ಶಕ್ತಿಗಳನ್ನು ಒಂದುಗೂಡಿಸುವ ಪ್ರಯತ್ನ. ನಿನ್ನೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭೇಟಿ ಮಾಡಿದ್ದೆ. ಇಂದು ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ್ದೇನೆ ಎಂದರು.

ಕಾಂಗ್ರೆಸ್ ಹಾಗೂ ಬಿಜೆಪಿಯೇತರ ರಂಗ ರಚನೆಯ ಯೋಜನೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೆಸಿಆರ್, ‘ಇದು ಒಂದೇ ಭೇಟಿಯಲ್ಲಿ ಮಾತುಕತೆ ನಡೆಸಿ ನಿರ್ಧಾರ ತೆಗೆದುಕೊಳ್ಳುವಂತಹ ಪ್ರಕ್ರಿಯೆ ಅಲ್ಲ. ಎಲ್ಲರ ಜತೆ ಮಾತುಕತೆ ನಡೆಸಿ ಶೀಘ್ರದಲ್ಲೇ ಈ ರಂಗ ರಚನೆಯ ಯೋಜನೆಯ ರೂಪುರೇಷೆ ರೂಪಿಸಲಾಗುತ್ತದೆ ಎಂದು ಹೇಳಿದರು.

KCR,K. Chandrasekhar Rao steps up efforts to build third front, meets Mamata Banerjee

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ