ಬನಿಹಾಲ್: ಮೂವತ್ತಾರು ಮಂದಿಯನ್ನು ಹೊತ್ತೊಯ್ಯುತ್ತಿದ್ದ ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸರಿದ್ದ ಬಸ್ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದ ಪರಿಣಾಮ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, 32 ಮಂದಿ ಗಾಯಗೊಂಡಿದ್ದಾರೆ
ಪೊಲೀಸರೆಲ್ಲರೂ ಸ್ಥಳೀಯ ಸಂಸ್ಥೆಯ ಚುನಾವಣೆಯ ಕರ್ತವ್ಯ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಜಮ್ಮು ಮತ್ತು ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ.
ಮುಂಜಾನೆ 8.45ರ ಸುಮಾರಿಗೆ ಘಟನೆ ನಡೆದಿದ್ದು, ಮರಗಳ ಸಹಾಯದಿಂದ ಬಸ್ ಅರ್ಧದಲ್ಲೇ ಸಿಲುಕಿಕೊಂಡಿತ್ತು. ರಕ್ಷಣಾ ಪಡೆ ಸ್ಥಳಕ್ಕೆ ಧಾವಿಸಿ ಎಲ್ಲರನ್ನೂ ಸುರಕ್ಷಿತವಾಗಿ ಮೇಲೆತ್ತಿದ್ದಾರೆ.
Bus With 36 Border Cops Falls Into Gorge In Jammu And Kashmir