ರಾಯ್ಪುರ: ಛತ್ತೀಸ್ ಗಢದಲ್ಲಿ ನೂತನ ಸಚಿವ ಸಂಪುಟವನ್ನು ವಿಸ್ತರಿಸಲಾಗಿದ್ದು, ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಇಂದು ಒಂಭತ್ತು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪೊಲೀಸ್ ಪರೇಡ್ ಗ್ರೌಂಡ್ನಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಪಾಲೆ ಆನಂದಿಬೆನ್ ಪಟೇಲ್ ನೂತನ ಸಚಿವರಿಗೆ ಪ್ರತಿಜ್ನಾ ವಿಧಿ ಬೋಧಿಸಿದರು. ಡಿ.17ರಂದು ಮುಖ್ಯಮಂತ್ರಿ ಭಾಘೆಲ್ ಜತೆ ಟಿ.ಎಸ್.ಸಿಂಗ್ ಮತ್ತು ತಮ್ರಾಧ್ವಜ್ ಸಾಹು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಖಾತೆ ಹಂಚಿಕೆ ಪ್ರಕ್ರಿಯೆ ನಡೆಯಲಿದೆ. ಸಚಿವ ಸಂಪುಟದಲ್ಲಿ ಎಲ್ಲ ಸಮುದಾಯಕ್ಕೆ ಸೇರಿದ ನಾಯಕರಿಗೆ ಸಮಾನ ಅವಕಾಶ ನೀಡಲಾಗಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.
ಛತ್ತೀಸ್ಗಢ ವಿಧಾನಸಭಾ ಚುನಾವಣೆಯಲ್ಲಿ 90 ಸೀಟುಗಳಲ್ಲಿ ಕಾಂಗ್ರೆಸ್ 68 ಕ್ಷೇತ್ರಗಳಲ್ಲಿ ಬಹುಮತ ಪಡೆದು ಜಯ ಗಳಿಸಿತ್ತು. ಬಿಜೆಪಿ ಕೇವಲ 15 ಸೀಟುಗಳನ್ನು ಪಡೆದು ಹೀನಾಯ ಸೋಲನುಭವಿಸಿತ್ತು.
Chhattisgarh Cabinet: 9 MLAs take oath as ministers in presence of CM Bhupesh Baghel