ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಸರ್ಕಾರದ ನೂತನ ಸಂಪುಟ ವಿಸ್ತರಣೆ: 9 ಸಚಿವರ ಪದಗ್ರಹಣ

ರಾಯ್​ಪುರ: ಛತ್ತೀಸ್ ಗಢದಲ್ಲಿ ನೂತನ ಸಚಿವ ಸಂಪುಟವನ್ನು ವಿಸ್ತರಿಸಲಾಗಿದ್ದು, ಮುಖ್ಯಮಂತ್ರಿ ಭೂಪೇಶ್​ ಬಾಘೆಲ್​ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಇಂದು ಒಂಭತ್ತು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪೊಲೀಸ್​ ಪರೇಡ್​ ಗ್ರೌಂಡ್​ನಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಪಾಲೆ ಆನಂದಿಬೆನ್​ ಪಟೇಲ್ ನೂತನ ಸಚಿವರಿಗೆ ಪ್ರತಿಜ್ನಾ ವಿಧಿ ಬೋಧಿಸಿದರು. ಡಿ.17ರಂದು ಮುಖ್ಯಮಂತ್ರಿ ಭಾಘೆಲ್​ ಜತೆ ಟಿ.ಎಸ್​.ಸಿಂಗ್​ ಮತ್ತು ತಮ್ರಾಧ್ವಜ್​ ಸಾಹು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಖಾತೆ ಹಂಚಿಕೆ ಪ್ರಕ್ರಿಯೆ ನಡೆಯಲಿದೆ. ಸಚಿವ ಸಂಪುಟದಲ್ಲಿ ಎಲ್ಲ ಸಮುದಾಯಕ್ಕೆ ಸೇರಿದ ನಾಯಕರಿಗೆ ಸಮಾನ ಅವಕಾಶ ನೀಡಲಾಗಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

ಛತ್ತೀಸ್​ಗಢ ವಿಧಾನಸಭಾ ಚುನಾವಣೆಯಲ್ಲಿ 90 ಸೀಟುಗಳಲ್ಲಿ ಕಾಂಗ್ರೆಸ್ 68 ಕ್ಷೇತ್ರಗಳಲ್ಲಿ ಬಹುಮತ ಪಡೆದು ಜಯ ಗಳಿಸಿತ್ತು. ಬಿಜೆಪಿ ಕೇವಲ 15 ಸೀಟುಗಳನ್ನು ಪಡೆದು ಹೀನಾಯ ಸೋಲನುಭವಿಸಿತ್ತು.

Chhattisgarh Cabinet: 9 MLAs take oath as ministers in presence of CM Bhupesh Baghel

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ