ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಪರೋಕ್ಷ ಟಾಂಗ್ ನೀಡಿದ ಸಚಿವ ಗಡ್ಕರಿ

ನವದೆಹಲಿ: ಪಕ್ಷದ ಶಾಸಕರು, ಸಂಸದರು ಸಮರ್ಪಕವಾಗಿ ಕೆಲಸ ಮಾಡದಿದ್ದರೆ ಅದಕ್ಕೆ ಪಕ್ಷದ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಬೇಕು ಎಂದು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಮೂಲಕ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ನಂತರ ಪಕ್ಷದ ನಾಯಕತ್ವ ವಿರುದ್ಧ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ನಿತಿನ್ ಗಡ್ಕರಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಗೃಹ ಸಚಿವಾಲಯದ ಯಶಸ್ಸಿಗೆ ತರಬೇತಿ ಹಾಗೂ ಕೌಶಲಯುತ ಐಎಎಸ್, ಐಪಿಎಸ್ ಅಧಿಕಾರಿಗಳು ಪ್ರಮುಖ ಕಾರಣ. ಈ ಎಲ್ಲಾ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ನಾನು ಪಕ್ಷದ ಅಧ್ಯಕ್ಷನಾಗಿದ್ದುಕೊಂಡು ಸಂಸದರು, ಶಾಸಕರು ಸರಿಯಾಗಿ ಕೆಲಸ ಮಾಡದಿದ್ದರೆ ಯಾರು ಜವಾಬ್ದಾರರಾಗಬೇಕಾಗುತ್ತದೆ? ಎಂದು ನಿತಿನ್ ಗಡ್ಕರಿ ಪ್ರಶ್ನಿಸಿದ್ದಾರೆ.

ಮಧ್ಯಪ್ರದೇಶ, ರಾಜಸ್ತಾನ, ಹಾಗೂ ಛತ್ತೀಸ್ ಗಡ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಸೋತ ಕೆಲವು ವಾರಗಳ ಬಳಿಕ ನಿತಿನ್ ಗಡ್ಕರಿ ಪಕ್ಷದ ನಾಯಕತ್ವವನ್ನು ಪ್ರಶ್ನಿಸಿದ್ದರು.

ಚುನಾವಣೆಯಲ್ಲಿ ಸೋತರೆ ಪಕ್ಷದ ನಾಯಕರೇ ಜವಾಬ್ದಾರಿ ಹೊರಬೇಕಾಗುತ್ತದೆ. ಸೋಲಿನ ಹೊಣೆ ಹೊರುವುದೂ ಸಹ ನಾಯಕತ್ವದ ಭಾಗವಾಗಿರಬೇಕು ಎಂದು ಅವರು ಹೇಳಿಕೆ ನೀಡಿದ್ದರು.

Nitin Gadkari, Words On “Taking Responsibility”,Amit Shah

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ