ದೇಶದ ಅತಿ ಉದ್ದದ ರೈಲು-ರಸ್ತೆ ಸೇತುವೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ದೇಶದ ಅತಿ ಉದ್ದದ ಬೋಗಿಬೀಲ್ ರೈಲು ಮತ್ತು ರಸ್ತೆ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಾರ್ಪಣೆ ಮಾಡಿದ್ದಾರೆ.

ಬ್ರಹ್ಮಪುತ್ರಾ ನದಿಗೆ ಕಟ್ಟಿರುವ ಬೋಗಿಬೀಲ್‌ ಸೇತುವೆ ಅಸ್ಸಾಂ-ಅರುಣಾಚಲ ಪ್ರದೇಶದ ನಡುವೆ ರೈಲು ಹಾಗೂ ರಸ್ತೆ ಸಂಪರ್ಕವನ್ನು ಕಲ್ಪಿಸುತ್ತಿದೆ. 4.9ಕಿ.ಮೀ ಉದ್ದದ ಬೃಹತ್‌ ಸೇತುವೆ ದೇಶದಲ್ಲೇ ಅತ್ಯಂತ ಉದ್ದನೆಯ ರೈಲ್‌ರೋಡ್‌ ಸೇತುವೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ನಡುವಣ ಪ್ರಮುಖ ಸಂಪರ್ಕ ಮಾರ್ಗದಲ್ಲಿರುವ ಈ ಸೇತುಯನ್ನು 5,900 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಮಾಡಲಾಗಿದ್ದು, ಸಂಚಾರಕ್ಕೆ ಮುಕ್ತಗೊಂಡಿದೆ.

1997ರಲ್ಲಿ ಎಚ್‌.ಡಿ. ದೇವೇಗೌಡರು ಪ್ರಧಾನಿಯಾಗಿದ್ದಾಗ ಈ ಸೇತುವೆ ಯೋಜನೆಗೆ ಅಡಿಗಲ್ಲು ಹಾಕಲಾಗಿತ್ತು. ನಂತರ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ-1 ಸರಕಾರ 2002ರಲ್ಲಿ ಸೇತುವೆಯ ಕಾಮಗಾರಿ ಆರಂಭಿಸಿತು. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ-2 ಸರಕಾರ ಬಂದ ನಂತರ ನಾಲ್ಕೇ ವರ್ಷಗಳಲ್ಲಿ ಸೇತುವೆ ಕಾಮಗಾರಿ ಪೂರ್ಣಗೊಂಡು ಇದೀಗ ಉದ್ಘಾಟನೆಯಾಗಿದೆ.

Assam’s Bogibeel Bridge, Inaugurated, PM Modi

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ