ಪೊಲೀಸರಿಂದ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಬೆಂಗಳೂರು, ಡಿ.25-ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಅಂತಾರಾಜ್ಯ ಮೂವರು ಆರೋಪಿಗಳನ್ನು ತಿಲಕ್‍ನಗರ ಠಾಣೆ ಪೊಲೀಸರು ಬಂಧಿಸಿ 11 ಕೆಜಿ 200 ಗ್ರಾಂ ತೂಕದ ಮಾದಕ ವಸ್ತು ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಂಡಿದ್ದಾರೆ.

ತ್ರಿಪುರಾ ರಾಜ್ಯದ ಮಂದೀಪ್‍ರೈ (40), ಮಿರ್ನಲ್ ಕಾಂತಿ ದೇಬನಾಥ್(33), ಪ್ರಸನ್ ಜೀತ್ ದತ್ತ (23) ಬಂಧಿತ ಆರೋಪಿಗಳಾಗಿದ್ದು, ಇವರೆಲ್ಲರೂ ತ್ರಿಪುರಾ ಮತ್ತು ಪಶ್ಚಿಮ ಬಂಗಾಳ ರಾಜ್ಯದ ನಿವಾಸಿಗಳು.

ಬೆಂಗಳೂರಿನ ಈಜಿಪುರದಲ್ಲಿ ಮಂದೀಪ್‍ರೈ ಫಾಸ್ಟ್‍ಫುಡ್ ಹೊಟೇಲ್ ಇಟ್ಟುಕೊಂಡಿದ್ದು, ಈತ ತ್ರಿಪುರಾದಿಂದ ಕಡಿಮೆ ಬೆಲೆಗೆ ಗಾಂಜಾ ತರಿಸಿಕೊಂಡು ಹೊಟೇಲ್‍ಗಳಲ್ಲಿ ಕೆಲಸ ಮಾಡುವ ಹುಡುಗರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದಾಗ ತಿಲಕ್ ನಗರ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ