ಖಾತೆ ಹಂಚಿಕೆ ವಿಚಾರ: ಹೈಕಮಾಂಡ್ ಒಪ್ಪಿಗೆ ಬಳಿಕ ನಿರ್ಧಾರ ಪ್ರಕಟ

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಂಪುಟಕ್ಕೆ ಸೇರ್ಪಡೆಯಾಗಿರುವ 8 ನೂತನ ಸಚಿವರಿಗೆ ಖಾತೆ ಹಂಚುವ ಸಂಬಂಧ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ ಪ್ರಮುಖ ನಾಯಕರೊಂದಿಗೆ ನಡೆಸಿದ ಸಭೆ ಮುಕ್ತಾಯವಾಗಿದ್ದು, ಹೈಕಮಾಂಡ್​ ಒಪ್ಪಿಗೆ ಬಳಿಕ ಪಟ್ಟಿ ಪ್ರಕಟವಾಗಲಿದೆ.

ಸಭೆ ಬಳಿಕ ಮಾತನಾಡಿದ ಕೆ.ಸಿ. ವೇಣುಗೋಪಾಲ್​, ಖಾತೆ ಹಂಚಿಕೆ ಸಂಬಂಧ ಚರ್ಚೆ ಮಾಡಿದ್ದೇವೆ. ಆದಷ್ಟು ಬೇಗ ಖಾತೆ ಹಂಚಿಕೆ ಆಗಲಿದೆ. ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರ ಒಪ್ಪಿಗೆ ಪಡೆದು ಪಟ್ಟಿ ಪ್ರಕಟಿಸುತ್ತೇವೆ.

ಇನ್ನು ಸಂಪುಟ ಪುನರಚನೆ ವಿಚಾರವಾಗಿ ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಸಂಬಂಧಿಸಿದಂತೆ ಮಾತನಾಡಿದ ವೇಣುಗೋಪಾಲ್, ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅವರ ಸಮಸ್ಯೆ ಇಲ್ಲ. ಅವರು ನಮ್ಮ ಉತ್ತಮ ನಾಯಕ. ರಾಮಲಿಂಗಾರೆಡ್ಡಿ ಬೆಂಗಳೂರಿನ ಹಿರಿಯ ನಾಯಕ. ರಾಮಲಿಂಗಾರೆಡ್ಡಿ ಅವರೊಂದಿಗೆ ಸಿದ್ದರಾಮಯ್ಯ ಚರ್ಚೆ ಮಾಡಿದ್ದಾರೆ. ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ