ಲಖನೌ: ಸಮಾಜವಾದಿ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಮತ ಚಲಾಯಿಸುತ್ತೇನೆ ಎಂದ ವಿಕಲಾಂಗ ಚೇತನ ವ್ಯಕ್ತಿಗೆ ಉತ್ತರ ಪ್ರದೇಶದ ಬಿಜೆಪಿ ನಾಯಕರೊಬ್ಬರು ಥಳಿಸಿರುವ ಘಟನೆ ನಡೆದಿದ್ದು, ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಬಿಜೆಪಿ ನಾಯಕ ಮೊಹಮ್ಮದ್ ಮಿಯಾ ಎಂಬುವವರು ಬಿಜೆಪಿ ವಿರುದ್ಧ ಹೇಳಿಕೆ ನೀಡಿದ ಮತ್ತು ಅಖಿಲೇಶ್ ಯಾದವ್ಗೆ ಮತ ಚಲಾಯಿಸುತ್ತೇನೆ ಎಂದು ಹೇಳಿದ ವ್ಯಕ್ತಿಗೆ ದೊಣ್ಣೆಯಿಂದ ಥಳಿಸುತ್ತಿರುವ ವಿಡಿಯೋ ಈಗ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಮಿಯಾ, ಆ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕುರಿತು ಅವಹೇಳಕಾರಿ ಹೇಳಿಕೆ ನೀಡಿದ. ನಾನು ಮೊದಲಿಗೆ ಆತನಿಗೆ ತಿಳಿಹೇಳಲು ಪ್ರಯತ್ನಿಸಿದೆ. ಆದರೆ ಆತ ಕುಡಿದಿದ್ದರಿಂದ ನನ್ನ ಮಾತು ಕೇಳಲಿಲ್ಲ. ಆ ಸಂದರ್ಭದಲ್ಲಿ ನಾನು ಆತನನ್ನು ಸ್ಥಳದಿಂದ ತೆರಳುವಂತೆ ತಿಳಿಸುತ್ತಿದ್ದೆನೆ ಹೊರತು ಆತನಿಗೆ ಥಳಿಸಿಲ್ಲ ಎಂದು ತಿಳಿಸಿದ್ದಾರೆ.
ಘಟನೆ ಸಂಬಂಧ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲು ನಮ್ಮ ತಂಡವನ್ನು ಕಳುಹಿಸಲಾಗಿದೆ ಎಂದು ಸಂಭಾಲ್ನ ಸರ್ಕಲ್ ಆಫೀಸರ್ ಸುದೇಶ್ ಕುಮಾರ್ ತಿಳಿಸಿದ್ದಾರೆ.
BJP leader, thrashes disabled man, supporting Akhilesh Yadav